Homeಮುಖಪುಟರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

- Advertisement -
- Advertisement -

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (NDRF) ಅಡಿಯಲ್ಲಿ ಮಂಜೂರಾದ ಒಟ್ಟು ಹಣದಲ್ಲಿ ಅರ್ಧದಷ್ಟನ್ನೂ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಬಿಡುಗಡೆ ಮಾಡಿಲ್ಲ ಎಂಬ ಕಳವಳಕಾರಿ ಸತ್ಯವನ್ನು ಭಾರತೀಯ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲರ (CAG) ವರದಿ ಬಹಿರಂಗಪಡಿಸಿದೆ.

ಸಂಸತ್ತಿನಲ್ಲಿ ಮಂಡಿಸಲಾದ 2024-25ರ ಕೇಂದ್ರ ಸರ್ಕಾರದ ಲೆಕ್ಕಪತ್ರ ವರದಿಯನ್ನು ವಿಶ್ಲೇಷಿಸಿರುವ ಸಿಎಜಿ, ಕೇಂದ್ರ ಸರ್ಕಾರವು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಅನುದಾನವನ್ನು ತಡೆಹಿಡಿಯುತ್ತಿರುವ ಶೈಲಿಯನ್ನು ಸಂಪೂರ್ಣವಾಗಿ ಬಯಲಿಗೆಳೆದಿದೆ.

ಸ್ವರೂಪದ ಪ್ರಕೃತಿ ವಿಕೋಪಗಳ ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ಒಟ್ಟು ₹11,474 ಕೋಟಿ ಮಂಜೂರಾಗಿತ್ತು. ಆದರೆ, ರಾಜ್ಯಗಳಿಗೆ ತಲುಪಿದ್ದು ಕೇವಲ ₹5,356 ಕೋಟಿ ಮಾತ್ರ. ಅಂದರೆ, ಶೇ. 53 ಕ್ಕಿಂತಲೂ ಹೆಚ್ಚು ಅನುದಾನ (₹6,117.97 ಕೋಟಿ) ಬಳಕೆಯಾಗದೆ ಕೇಂದ್ರದ ಬೊಕ್ಕಸದಲ್ಲೇ ಉಳಿದುಕೊಂಡಿದೆ.

ರಾಷ್ಟ್ರೀಯ ವಿಪತ್ತು ಶಮನ ನಿಧಿ (NDMF) ಅಡಿಯಲ್ಲಿ ಮಂಜೂರಾಗಿದ್ದ ₹2,868 ಕೋಟಿಗಳ ಪೈಕಿ ರಾಜ್ಯಗಳಿಗೆ ವರ್ಗಾವಣೆಯಾಗಿದ್ದು ಕೇವಲ ₹719.72 ಕೋಟಿ ಮಾತ್ರ. ಶೇ. 75 ರಷ್ಟು ಅನುದಾನ ಬಳಕೆಯಾಗದೆ ಬಾಕಿ ಉಳಿದಿದೆ.

ರಾಜ್ಯಗಳಿಗೆ ನೀಡಲಾಗುವ ‘ವಿಶೇಷ ನೆರವು’ ಯೋಜನೆಗೆ ₹20,000 ಕೋಟಿ ನಿಗದಿಪಡಿಸಲಾಗಿದ್ದರೂ, ವೆಚ್ಚ ಮಾಡಿದ್ದು ಕೇವಲ ₹3,350 ಕೋಟಿ. ಉಳಿದ ಶೇ. 83 ರಷ್ಟು ಹಣ ಬಿಡುಗಡೆಯೇ ಆಗಿಲ್ಲ.ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ‘ಮುಂಗಡ ನೆರವಿನ ಸಾಲ’ವಾಗಿ ನೀಡಲು ಕಾಯ್ದಿರಿಸಲಾಗಿದ್ದ ₹100 ಕೋಟಿ ಅನುದಾನದಿಂದ ಒಂದು ಪೈಸೆಯನ್ನೂ ಬಳಸಲಾಗಿಲ್ಲ.

ಇದಷ್ಟೇ ಅಲ್ಲದೆ, 2022-23ರಲ್ಲಿ ₹67,882 ಕೋಟಿ, 2023-24ರಲ್ಲಿ ₹46,012.89 ಕೋಟಿ ಹಾಗೂ 2024-25ರಲ್ಲಿ ₹36,219 ಕೋಟಿ ಹಣವು ರಾಜ್ಯಗಳಿಗೆ ತಲುಪದೆ ಬಾಕಿ ಉಳಿದಿದೆ ಎಂದು ಸಿಎಜಿ ಕಳವಳ ವ್ಯಕ್ತಪಡಿಸಿದೆ.ಪ್ರಕೃತಿ ವಿಕೋಪಗಳ ಸಮಯದಲ್ಲಿ ಕೇಂದ್ರದಿಂದ ಸೂಕ್ತ ಪರಿಹಾರ ಸಿಗದೆ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳು ನಿರಂತರವಾಗಿ ಪರದಾಡುವಂತಾಗಿದೆ.

ಕರ್ನಾಟಕ: 2024ರಲ್ಲಿ ಭೀಕರ ಬರಗಾಲ ಎದುರಿಸಿದ್ದ ಕರ್ನಾಟಕ ಸರ್ಕಾರವು ₹18,000 ಕೋಟಿ ಪರಿಹಾರ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕೇವಲ ₹3,499 ಕೋಟಿ ಮಾತ್ರ. ಈ ತಾರತಮ್ಯವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು.

ತಮಿಳುನಾಡು: ಮಿಚೌಂಗ್ ಚಂಡಮಾರುತದಿಂದಾದ ಹಾನಿಗೆ ₹37,907.21 ಕೋಟಿ ಪರಿಹಾರ ಕೋರಿತ್ತು. ಆದರೆ ದೊರೆತದ್ದು ಕೇವಲ ₹276 ಕೋಟಿ.

ಕೇರಳ: ವಯನಾಡ್ ಭೀಕರ ಭೂಕುಸಿತದ ಸರಣಿ ದುರಂತಕ್ಕೆ ಕೇರಳ ₹2,221 ಕೋಟಿ ಪರಿಹಾರ ಕೋರಿತ್ತಾದರೂ, ಕೇಂದ್ರ ಅನುಮೋದಿಸಿದ್ದು ಕೇವಲ ₹260.56 ಕೋಟಿ. ಈ ಅನ್ಯಾಯವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದೆ.

ಅಸ್ಸಾಂ: ಪ್ರವಾಹದಿಂದ ತತ್ತರಿಸಿದ್ದ ಅಸ್ಸಾಂ ರಾಜ್ಯ ಕೋರಿದ್ದ ಒಟ್ಟು ಹಣದಲ್ಲಿ ಕೇಂದ್ರ ಬಿಡುಗಡೆ ಮಾಡಿದ್ದು ಕೇವಲ ಶೇ. 2.4 ರಷ್ಟು ಮಾತ್ರ.

ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ನಿಯಮಾವಳಿಗಳ ಪ್ರಕಾರ, ರಾಜ್ಯ ವಿಪತ್ತು ಸ್ಪಂದನಾ ನಿಧಿ (SDRF) ಖಾಲಿಯಾದಾಗ ಅಥವಾ ತೀವ್ರ ಸ್ವರೂಪದ ದುರಂತ ಸಂಭವಿಸಿದಾಗ ರಾಜ್ಯಗಳು ಸಲ್ಲಿಸುವ ನಷ್ಟದ ವರದಿಯನ್ನು ಆಧರಿಸಿ ಕೇಂದ್ರದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಾಗುತ್ತದೆ. ತದನಂತರ NDRF ಅಡಿಯಲ್ಲಿ ಹಣ ಬಿಡುಗಡೆ ಮಾಡುವುದು ಕೇಂದ್ರದ ಕರ್ತವ್ಯ.

ಆದರೆ, ಸಿಎಜಿ ವರದಿಯೇ ಸ್ಪಷ್ಟಪಡಿಸಿರುವಂತೆ, ಮಂಜೂರಾದ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೆ ತನ್ನ ಬಳಿಯೇ ಇಟ್ಟುಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಆಪತ್ತಿನಲ್ಲಿರುವ ರಾಜ್ಯಗಳಿಗೆ ಮತ್ತು ಸಂಕಷ್ಟದಲ್ಲಿರುವ ಜನರಿಗೆ ಸ್ಪಷ್ಟ ವಂಚನೆ ಎಸಗುತ್ತಿದೆ ಎಂಬುದು ಸಾಬೀತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...