Homeಮುಖಪುಟಕೋಮುದ್ವೇಷದ ಪೋಸ್ಟ್ ಪ್ರಕರಣ: ಶರ್ಮಿಸ್ತಾ ಪನೋಲಿಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಕೋಮುದ್ವೇಷದ ಪೋಸ್ಟ್ ಪ್ರಕರಣ: ಶರ್ಮಿಸ್ತಾ ಪನೋಲಿಗೆ ಹೈಕೋರ್ಟ್ ಮಧ್ಯಂತರ ಜಾಮೀನು

- Advertisement -
- Advertisement -

ಕೋಮುದ್ವೇಷದ ಹೇಳಿಕೆ ಒಳಗೊಂಡ ವಿಡಿಯೋ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸರಿಂದ ಬಂಧಿಸಲ್ಪಟ್ಟ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಮತ್ತು ಕಾನೂನು ವಿದ್ಯಾರ್ಥಿನಿ ಶರ್ಮಿಸ್ತಾ ಪನೋಲಿಗೆ ಕಲ್ಕತ್ತಾ ಹೈಕೋರ್ಟ್ ಬುಧವಾರ (ಜೂ.5) ಮಧ್ಯಂತರ ಜಾಮೀನು ನೀಡಿದೆ.

ಹೈಕೋರ್ಟ್ ಆಕೆಗೆ 10,000 ರೂ.ಗಳ ಜಾಮೀನು ಬಾಂಡ್ ಸಲ್ಲಿಸುವಂತೆಯೂ ನಿರ್ದೇಶಿಸಿದೆ.

ಪಶ್ಚಿಮ ಬಂಗಾಳದ ವಿವಿಧ ಪೊಲೀಸ್ ಠಾಣೆಗಳಲ್ಲಿ ಶರ್ಮಿಸ್ತಾ ವಿರುದ್ಧ ಕನಿಷ್ಠ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಅವರ ವಕೀಲರು ಹೇಳಿದ್ದಾರೆ. ಕೋಲ್ಕತ್ತಾದ ಗಾರ್ಡನ್ ರೀಚ್ ಪೊಲೀಸ್ ಠಾಣೆಯಲ್ಲಿ ವಜಾಹತ್ ಖಾನ್ ಖಾದ್ರಿ ಎಂಬವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

ಕೋಲ್ಕತ್ತಾ ಪೊಲೀಸರು ಈಗ ಖಾದ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ‘ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು’ ಅಪ್ಲೋಡ್ ಮಾಡಿದ್ದಾರೆ ಮತ್ತು ಅದು ಧಾರ್ಮಿಕ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿದ್ದಾರೆ. ಖಾದ್ರಿ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಖಾದ್ರಿ ವಿರುದ್ಧ ಧಾರ್ಮಿಕ ಟ್ರಸ್ಟ್ ಶ್ರೀ ರಾಮ್ ಸ್ವಾಭಿಮಾನ ಪರಿಷತ್, ಅವರು ಈ ಹಿಂದೆ ಪನೋಲಿ ವಿರುದ್ಧ ದೂರು ನೀಡಿದ್ದ ಅದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಖಾದ್ರಿ ವಿರುದ್ಧ ಮುಂಬೈ, ಅಸ್ಸಾಂ ಮತ್ತು ದೇಶದ ಇತರ ಭಾಗಗಳಲ್ಲಿ ದ್ವೇಷ ಭಾಷಣ ಹರಡಿದ ಮತ್ತು ಧಾರ್ಮಿಕ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಇದೇ ರೀತಿಯ ಅನೇಕ ದೂರುಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಖಾದ್ರಿ ಅವರ ಕುಟುಂಬವು ಅವರನ್ನು ಸಮರ್ಥಿಸಿಕೊಂಡಿದ್ದು, ಅವರು ‘ಅಮಾಯಕ ಮತ್ತು ಜಾತ್ಯತೀತ’ ಎಂದು ಹೇಳಿದ್ದಾರೆ.

ಪುಣೆಯ ಸಿಂಬಿಯೋಸಿಸ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಶರ್ಮಿಸ್ತಾ ಪನೋಲಿ, ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಲ್ಲಿ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ ಆರೋಪವಿದೆ.

ಮೇ 14ರಂದು ಹಾಕಿದ್ದ ತನ್ನ ಪೋಸ್ಟ್ ವಿವಾದಕ್ಕೆ ತಿರುಗುತ್ತಿದ್ದಂತೆ, ಅದನ್ನು ಡಿಲಿಟ್ ಮಾಡಿ ಶರ್ಮಿಸ್ತಾ ಎಕ್ಸ್‌ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ಮೇ 15,2025 ರಂದು ಅವರ ವಿರುದ್ಧ ಕೊಲ್ಕತ್ತಾದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎರಡು ದಿನಗಳ ನಂತರ ಮೇ 17,2025 ರಂದು ಶರ್ಮಿಸ್ತಾ ವಿರುದ್ದ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಮೇ 30ರಂದು ಕೋಲ್ಕತ್ತಾ ಪೊಲೀಸರು ಗುರುಗ್ರಾಮದಲ್ಲಿ ಅವರನ್ನು ಬಂಧಿಸಿದ್ದರು.

ಕೋಲ್ಕತ್ತಾದ ವಿಚಾರಣಾ ನ್ಯಾಯಾಲಯ ಮೇ 31ರಂದು ಶರ್ಮಿಸ್ತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಅದನ್ನು ಪ್ರಶ್ನಿಸಿ ಶರ್ಮಿಸ್ತಾ ಕಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜೂನ್ 3ರಂದು ಹೈಕೋರ್ಟ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.

ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...