Homeಮುಖಪುಟಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ “ತರಾತುರಿ”ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಶಂಪಾ ಸರ್ಕಾರ್ ಮಂಗಳವಾರ ತೀವ್ರವಾಗಿ ಪ್ರಶ್ನಿಸಿದ್ದಾರೆ. ಯಾವ ಬಣ “ನಿಜವಾದ” ತೃಣಮೂಲ ಕಾಂಗ್ರೆಸ್ ಎಂಬುದನ್ನು ಚುನಾವಣಾ ಆಯೋಗವು ಇನ್ನೂ ನಿರ್ಧರಿಸದೇ ಇರುವಾಗ ಸ್ಪೀಕರ್ ಈ ನಿರ್ಧಾರ ಕೈಗೊಂಡಿರುವುದಕ್ಕೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಹಾಗೂ ಅವರು ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದ್ದ ಶೋಭಂದೇಬ್ ಚಟ್ಟೋಪಾಧ್ಯಾಯ ಜೂನ್ ತಿಂಗಳಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸರ್ಕಾರ್ ನಡೆಸುತ್ತಿದ್ದರು.

ರಿತಬ್ರತ ಅವರನ್ನು ನೇಮಕ ಮಾಡಿದ ಸ್ಪೀಕರ್ ಬೋಸ್ ಅವರ ನಿರ್ಧಾರದ ಬಗ್ಗೆ ಪ್ರಶ್ನಿಸಿದ ನ್ಯಾಯಮೂರ್ತಿ ಸರ್ಕಾರ್, “ಈ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವಾಗ… ಮತ್ತು ಈ ಬಣಗಳ ಅಧಿಕೃತತೆಯನ್ನು ಚುನಾವಣಾ ಆಯೋಗವೇ ನಿರ್ಧರಿಸಬೇಕಾಗಿರುವಾಗ, ವಿಧಾನಸಭೆಯ ಸ್ಪೀಕರ್ ಈ ನಿರ್ಧಾರ ತೆಗೆದುಕೊಳ್ಳಲು ಅಷ್ಟೊಂದು ತರಾತುರಿ ಏಕಿತ್ತು?” ಎಂದು ಕೇಳಿದರು.

ದೆಹಲಿಯಲ್ಲಿ ಪಕ್ಷಾಂತರ ನಿರೋಧಕ ಕಾಯ್ದೆಯಡಿ ವಿಚಾರಣೆಗಳು ನಡೆಯುತ್ತಿರುವಾಗ, ಸ್ಪೀಕರ್ ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಈ ನಿರ್ಧಾರವು ಅಪ್ರಜಾಪ್ರಭುತ್ವ ಮತ್ತು ಕಾನೂನುಬಾಹಿರ ಎಂದು ಮಮತಾ ಆಪ್ತರು ಮೊದಲಿನಿಂದಲೂ ವಾದಿಸುತ್ತಿದ್ದಾರೆ.

“ಯಾವ ಪಕ್ಷ ನಿಜವಾದ ಪಕ್ಷ ಎಂಬುದನ್ನು ಚುನಾವಣಾ ಆಯೋಗವೇ ತೀರ್ಮಾನಿಸಬೇಕಿರುವಾಗ, ಸ್ಪೀಕರ್ ಅವರೇ ಯಾವುದು ನಿಜವಾದ ವಿರೋಧ ಪಕ್ಷ ಮತ್ತು ಅದರ ನಾಯಕ ಯಾರು ಎಂದು ಘೋಷಿಸಲು ಹೇಗೆ ಸಾಧ್ಯ?” ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಯಾವುದು ನಿಜವಾದ ಅಸಲಿ ತೃಣಮೂಲ ಎಂಬುದನ್ನು ಚುನಾವಣಾ ಆಯೋಗ (ನಿರ್ವಾಚನ್ ಸದನ್) ಪ್ರಸ್ತುತ ಪರಿಶೀಲಿಸುತ್ತಿದೆ. ತೃಣಮೂಲದ 28 ಲೋಕಸಭಾ ಸಂಸದರ ಪೈಕಿ 20 ಸಂಸದರು ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ ಜೊತೆ ವಿಲೀನಗೊಂಡಿರುವುದು ಮತ್ತು ತೃಣಮೂಲದ 13 ರಾಜ್ಯಸಭಾ ಸದಸ್ಯರ ಪೈಕಿ ಮೂವರು ರಾಜೀನಾಮೆ ನೀಡಿ ಬಿಜೆಪಿಯಿಂದ ಉಪಚುನಾವಣೆಗೆ ಸ್ಪರ್ಧಿಸುತ್ತಿರುವುದು—ಇದಕ್ಕಿಂತ ಈ ವಿಷಯ ಭಿನ್ನವಾಗಿದೆ.

ಚಟ್ಟೋಪಾಧ್ಯಾಯ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಹಾಗೂ ತೃಣಮೂಲ ಸಂಸದ ಕಲ್ಯಾಣ್ ಬ್ಯಾನರ್ಜಿ, ಸ್ಪೀಕರ್ ಬೋಸ್ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಕೆಲಸ ಮಾಡಿದ್ದಾರೆ ಮತ್ತು ಚುನಾವಣಾ ಆಯೋಗವು ಈ ವಿಷಯ ಇತ್ಯರ್ಥಪಡಿಸುವವರೆಗೆ ನೇಮಕಾತಿಯನ್ನು ತಡೆಹಿಡಿಯಬೇಕಾಗಿತ್ತು ಎಂದು ವಾದಿಸಿದರು.

ರಿತಬ್ರತ ಪರ ವಕೀಲ ಜಯದೀಪ್ ಕರ್ ಮತ್ತು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಬಿಲ್ವದಲ್ ಭಟ್ಟಾಚಾರ್ಯ ಅವರು, ಇದನ್ನು ಸ್ಪೀಕರ್ ಬೋಸ್ ಅವರ ‘ತಾತ್ಕಾಲಿಕ ಕ್ರಮ’ (Interim measure) ಎಂದು ಒಪ್ಪಿಕೊಳ್ಳುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಆದರೆ, ಈ ವಾದವನ್ನು ತಿರಸ್ಕರಿಸಿದ ನ್ಯಾಯಾಧೀಶರು, “ಯಾವುದೇ ಒಂದು ಕಾನೂನುಬಾಹಿರ ಕ್ರಮವನ್ನು ತಾತ್ಕಾಲಿಕ ವ್ಯವಸ್ಥೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ನಿರ್ಧಾರ ಬರುವ ಮುನ್ನವೇ, ಪಕ್ಷವು ಎರಡು ಗುಂಪುಗಳಾಗಿ ಸೀಳಾಗಿರುವಾಗ ಸ್ಪೀಕರ್ ಇದನ್ನು ಹೇಗೆ ಮಾಡಿದರು? ಎಂಬುದೇ ನನ್ನ ಪ್ರಶ್ನೆ” ಎಂದು ಹೇಳಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ನಿಗದಿಪಡಿಸಿದರು.

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕಲ್ಯಾಣ್ ಕಿಡಿ: ಬಳಿಕ ಮಂಗಳವಾರ ಮಾತನಾಡಿದ ತೃಣಮೂಲ ಸಂಸದ ಕಲ್ಯಾಣ್ ಬ್ಯಾನರ್ಜಿ, ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರು ಏಳು ವರ್ಷಗಳಿಂದ ತೃಣಮೂಲದ ಚುನಾವಣಾ ತಂತ್ರಗಾರಿಕೆಗಾಗಿ ತಂದಿದ್ದ ‘ಐ-ಪ್ಯಾಕ್’ (I-PAC) ಸಂಸ್ಥೆಯ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದರು.

“ಕ್ಯಾಮಕ್ ಸ್ಟ್ರೀಟ್ (ಅಭಿಷೇಕ್ ಅವರ ಕಚೇರಿ) ನಮ್ಮನ್ನು ನಾಶಪಡಿಸಿತು” ಎಂದು ಆಕ್ರೋಶ ಹೊರಹಾಕಿದ ಅವರು, ರಿತಬ್ರತ ಸೇರಿದಂತೆ ಸದ್ಯ ಬಂಡಾಯವೆದ್ದಿರುವ ಬಹುತೇಕ ಪ್ರಮುಖ ನಾಯಕರನ್ನು ಪಕ್ಷಕ್ಕೆ ಕರೆತಂದಿದ್ದೇ ಅಥವಾ ಅವರಿಗೆ ಉನ್ನತ ಸ್ಥಾನ ನೀಡಿದ್ದೇ ಅಭಿಷೇಕ್ ಬ್ಯಾನರ್ಜಿ ಎಂದು ದೂರಿದರು. “ನಾನು ಈ ಹಿಂದೆ ಐ-ಪ್ಯಾಕ್ ಸಂಸ್ಥೆಯನ್ನು ಟೀಕಿಸಿದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಈಗ ಐ-ಪ್ಯಾಕ್ ಮತ್ತು ಅಭಿಷೇಕ್ ಅವರಿಂದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡ ನಾಯಕರುಗಳೇ ಇಂದು ಅವರ ವಿರುದ್ಧ ಮಾತನಾಡುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...