Homeಮುಖಪುಟಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಜಾರಿಗೆ ಕಲ್ಕತ್ತಾ ಹೈಕೋರ್ಟ್ ತಡೆ

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಜಾರಿಗೆ ಕಲ್ಕತ್ತಾ ಹೈಕೋರ್ಟ್ ತಡೆ

- Advertisement -
- Advertisement -

ಪಶ್ಚಿಮ ಬಂಗಾಳ ಸರ್ಕಾರವು 140 ಸಮುದಾಯಗಳನ್ನು ಇತರ ಹಿಂದುಳಿದ ವರ್ಗಗಳೆಂದು ವರ್ಗೀಕರಿಸುವ ಅಧಿಸೂಚನೆಯ ಅನುಷ್ಠಾನಕ್ಕೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ ಎಂದು ಬಾರ್ ಆಂಡ್ ಬೆಂಚ್‌ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಹೊಸ

ನ್ಯಾಯಮೂರ್ತಿಗಳಾದ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಾಂಥ ಅವರನ್ನೊಳಗೊಂಡ ಪೀಠವು, ಪ್ರಕರಣದ ಮುಂದಿನ ವಿಚಾರಣೆ ನಡೆಯಲಿರುವ ಜುಲೈ 31 ರವರೆಗೆ ಪಟ್ಟಿಯ ಆಧಾರದ ಮೇಲೆ ಕ್ರಮಗಳನ್ನು ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಪಶ್ಚಿಮ ಬಂಗಾಳ ಸರ್ಕಾರವು ಈ ತಿಂಗಳ ಆರಂಭದಲ್ಲಿ 76 ಉಪಜಾತಿಗಳನ್ನು ಇತರ ಹಿಂದುಳಿದ ವರ್ಗಗಳ ವರ್ಗಕ್ಕೆ ಸೇರಿಸುವ ಅಧಿಸೂಚನೆಯನ್ನು ಹೊರಡಿಸಿತ್ತು. ಇದರಿಂದಾಗಿ ಗುಂಪಿನಲ್ಲಿರುವ ಒಟ್ಟು ಸಮುದಾಯಗಳ ಸಂಖ್ಯೆ 140 ಕ್ಕೆ ತಲುಪಿದೆ.

140ರಲ್ಲಿ 80 ಸಮುದಾಯಗಳು ಮುಸ್ಲಿಮರಿಗೆ ಸೇರಿದವುಗಳಾಗಿದ್ದು, ಉಳಿದ 60 ಮುಸ್ಲಿಮೇತರರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮುಸ್ಲಿಮರು ಒಬಿಸಿ ವರ್ಗದಲ್ಲಿ ಸೇರಿಸಲಾದ ಜನಸಂಖ್ಯೆಯ 57.1% ರಷ್ಟಿದ್ದಾರೆ.

ರಾಜ್ಯ ಸರ್ಕಾರದ ಹಿಂದಿನ ಒಬಿಸಿಗಳ ಪಟ್ಟಿಯಲ್ಲಿ 113 ಉಪಗುಂಪುಗಳಿದ್ದವು, ಅದರಲ್ಲಿ 77 ಮುಸ್ಲಿಮರು ಮತ್ತು 36 ಮುಸ್ಲಿಮೇತರರಿದ್ದರು. ಆದಾಗ್ಯೂ, ಹೈಕೋರ್ಟ್ ಮೇ 2024 ರಲ್ಲಿ ಪಟ್ಟಿಯನ್ನು ರದ್ದುಗೊಳಿಸಿ, OBC ಮೀಸಲಾತಿಯನ್ನು 17% ರಿಂದ 7% ಕ್ಕೆ ಇಳಿಸಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹೊಸ ಪಟ್ಟಿಯು ರಾಜ್ಯ ಸರ್ಕಾರಕ್ಕೆ OBC ಮೀಸಲಾತಿಯನ್ನು 17% ಗೆ ಪುನಃಸ್ಥಾಪಿಸಲು ಅವಕಾಶ ನೀಡುತ್ತದೆ.

ಹೈಕೋರ್ಟ್‌ನ ಮೇ 2024 ರ ನಿರ್ಧಾರವು ಸುಮಾರು ಐದು ಲಕ್ಷ ಪ್ರಮಾಣಪತ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ತೀರ್ಪಿನ ವಿರುದ್ಧ ರಾಜ್ಯ ಸರ್ಕಾರದ ಅರ್ಜಿ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ.

ಸರ್ಕಾರ ಸಿದ್ಧಪಡಿಸಿದ ಹೊಸ ಪಟ್ಟಿಯು ನ್ಯಾಯಾಂಗ ನಿಂದನೆಗೆ ಸಮ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿಕೊಂಡಿದ್ದಾರೆ. “ತೃಣಮೂಲ ಕಾಂಗ್ರೆಸ್ ಸರ್ಕಾರವು ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

2010 ರ ಮೊದಲು, OBC ಪಟ್ಟಿಯಲ್ಲಿ 66 ಸಮುದಾಯಗಳಿದ್ದವು, ಅದರಲ್ಲಿ ಕೇವಲ 11 ಸಮುದಾಯಗಳು ಮುಸ್ಲಿಮರದ್ದಾಗಿತ್ತು ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, OBC ಪಟ್ಟಿಯಲ್ಲಿ ಈ ಗುಂಪುಗಳನ್ನು ಧರ್ಮದ ಕಾರಣಕ್ಕೆ ಸೇರಿಸಿಲ್ಲ, ಬದಲಾಗಿ ಆ ಸಮುದಾಯವು ಹಿಂದುಳಿದಿರುವಿಕೆಯನ್ನು ಮಾನದಂಡವಾಗಿಸಿ ಇದನ್ನು ಮಾಡಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಬಿಜೆಪಿಯು ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದ್ದು, “ಒಡೆದು ಆಳುವ” ನೀತಿಯನ್ನು ಅನುಸರಿಸುತ್ತಿದೆ ಎಂದು ಅದು ಆರೋಪಿಸಿದೆ. ಪಶ್ಚಿಮ ಬಂಗಾಳದ ಹೊಸ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...