Homeಮುಖಪುಟ‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ' ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

- Advertisement -
- Advertisement -

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದು ಹೈಕೋರ್ಟ್‌ ವಿರುದ್ಧ ಟೀಕೆಯನ್ನು ಮಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಬೇಕೆಂದು ವಕೀಲರ ಗುಂಪು ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಶಾಲಾ ಉದ್ಯೋಗಿಗಳ ನೇಮಾಕಾತಿಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ 24,000 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಈ ಟೀಕೆಯನ್ನು ಮಮತಾ ಬ್ಯಾನರ್ಜಿ ಅವರು ಮಾಡಿದ್ದಾರೆ.

ಹಿರಿಯ ವಕೀಲ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ನಾಯಕ ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರು ಇಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರಲ್ಲಿ “ಅವಹೇಳನಕಾರಿ” ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾನು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ತೆಗೆದುಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಿ, ಇಲ್ಲವಾದರೆ, ಪ್ರತಿ ನ್ಯಾಯಾಲಯವು ನಮ್ಮನ್ನು ನೋಡಿ ನಗುತ್ತಿದೆ ಎಂದು ಹೇಳಿದ್ದರು.

ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯದ ಘನತೆಯನ್ನು ಕುಗ್ಗಿಸಲು ಮುಖ್ಯಮಂತ್ರಿ ಬ್ಯಾನರ್ಜಿ ಅವರು ನಿರಂತರವಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಷಯದಲ್ಲಿ ದಾಖಲೆಯ ಜೊತೆ ಅರ್ಜಿ ಸಲ್ಲಿಸಬಹುದೇ ಎಂದು ನ್ಯಾಯಾಲಯ ಕೇಳಿದೆ. ಮುಖ್ಯಮಂತ್ರಿಯವರ ಹೇಳಿಕೆಗಳ ವರದಿಗಳೊಂದಿಗೆ ಅಫಿಡವಿಟ್ ಸಲ್ಲಿಸುವುದಾಗಿ ಭಟ್ಟಾಚಾರ್ಯ ಈ ವೇಳೆ ಹೇಳಿದ್ದಾರೆ.

ಇದಲ್ಲದೆ ಇತರ ಇಬ್ಬರು ವಕೀಲರು ಈ ವಿಷಯದಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ದುರುದ್ದೇಶಪೂರಿತ ಮತ್ತು ಮಾನಹಾನಿಕರ ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ಬ್ಯಾನರ್ಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮತ್ತೋರ್ವ ವಕೀಲರು ಹೈಕೋರ್ಟ್‌ಗೆ ಆಗ್ರಹಿಸಿದ್ದಾರೆ. ಮಧ್ಯಾಹ್ನದ ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ ಮತ್ತು ಮುಖ್ಯಮಂತ್ರಿಯವರ ವಿವಾದಾತ್ಮಕ ಹೇಳಿಕೆಗಳ ಕುರಿತು ಭಟ್ಟಾಚಾರ್ಯ ಅವರು ಸಲ್ಲಿಸಿದ ಮಾಧ್ಯಮ ವರದಿಗಳನ್ನು ದಾಖಲಿಸಿದೆ.

ಈ ವಾರದ ಆರಂಭದಲ್ಲಿ, ಹೈಕೋರ್ಟ್‌ನ ವಿಭಾಗೀಯ ಪೀಠವು 2016ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮಾಡಿದ ಸುಮಾರು 24,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಗಳನ್ನು ರದ್ದುಗೊಳಿಸಿತ್ತು. ನೇಮಕಾತಿಯನ್ನು ಅಸಿಂಧುಗೊಳಿಸಿದ ಹೈಕೋರ್ಟ್, 24,000 ಅಭ್ಯರ್ಥಿಗಳಿಗೆ “ಕಾನೂನುಬಾಹಿರವಾಗಿ” ನೇಮಕಗೊಂಡ ನಂತರ ಪಡೆದ ಸಂಬಳವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಈ ಏಪ್ರಿಲ್ 22ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...