Homeಮುಖಪುಟಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -
- Advertisement -

ಕೇರಳ ವಿಧಾನಸಭೆಯು ಸೋಮವಾರ ಲಕ್ಷದ್ವೀಪ ದ ಜನರನ್ನು ಬೆಂಬಲಿಸಿ ಉಭಯಪಕ್ಷೀಯ ನಿರ್ಣಯವನ್ನು ಅಂಗೀಕರಿಸಿತು. ಸ್ಥಳೀಯ ಭಾವನೆಗಳನ್ನು ಘಾಸಿಗೊಳಿಸಿ ಕೆಲವು ವಿವಾದಾತ್ಮಕ ಪ್ರಸ್ತಾಪಗಳನ್ನು ಮುಂದಿಡುತ್ತಿರುವ ಆಡಳಿತಾಧಿಕಾರಿ ಪ್ರಫುಲ್ ಕೆ ಪಟೇಲ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದೆ.

ಕೆಲವು ತಿದ್ದುಪಡಿಗಳನ್ನು ಮಂಡಿಸಿದರೂ, ಆಡಳಿತ ಪಕ್ಷದ ಶಾಸಕರೊಂದಿಗೆ ವಿರೋಧ ಪಕ್ಷದ ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯಗಳನ್ನು ಮಂಡಿಸಿದ್ದು, ಲಕ್ಷದ್ವೀಪದ ಆಡಳಿತವು ತನ್ನ ಕೆಲವು ನಿರ್ಧಾರಗಳ ಮೂಲಕ ಸಂಘಪರಿವಾರದ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರುವ ಪ್ರಯತ್ನಗಳನ್ನು ನಿರ್ಣಯವು ಖಂಡಿಸಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಇದು ತೆಂಗಿನ ಮರಗಳ ಮೇಲೆ ಕೇಸರಿ ಬಣ್ಣವನ್ನು ಹಚ್ಚುವುದರೊಂದಿಗೆ ಪ್ರಾರಂಭವಾಯಿತು. ಅದು ಈಗ ದ್ವೀಪವಾಸಿಗಳ ಆವಾಸಸ್ಥಾನ, ಜೀವನ ಮತ್ತು ನೈಸರ್ಗಿಕ ಸಂಬಂಧಗಳನ್ನು ನಾಶಪಡಿಸುವ ಮಟ್ಟಿಗೆ ಬೆಳೆದಿದೆ. ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದ್ವೀಪದಲ್ಲಿ ಹಾಕಿದ ಬ್ಯಾನರ್‌ಗಳನ್ನು ತೆಗೆದುಹಾಕಲಾಯಿತು ಮತ್ತು ಅದನ್ನು ಬರೆದವರನ್ನು ಲಕ್ಷದ್ವೀಪದಲ್ಲಿ ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ಅಪರಾಧ ದಾಖಲಾಗುವ ಸ್ಥಳದಲ್ಲಿ ಗೂಂಡಾ ಕಾಯ್ದೆಯನ್ನು ತರುವ ನಿರ್ಧಾರವನ್ನು ಅವರು ಟೀಕಿಸಿದರು. “ದ್ವೀಪದ ಮೀನುಗಾರರು ತಮ್ಮ ದೋಣಿ ಮತ್ತು ಬಲೆಗಳನ್ನು ಸಂಗ್ರಹಿಸಲು ಬಳಸಿದ ಶೆಡ್‌ಗಳನ್ನು ನಾಶಪಡಿಸಲಾಯಿತು. ಗೋಹತ್ಯೆಯನ್ನು ನಿಷೇಧಿಸುವ ‘ಸಂಘ ಪರಿವಾರದ ಕಾರ್ಯಸೂಚಿಯನ್ನು’ ಜಾರಿಗೆ ತಂದರು. ಅಸ್ತಿತ್ವದಲ್ಲಿರುವ ಎಲ್ಲಾ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನಯನ್ನು ರದ್ದುಪಡಿಸಿದರು” ಎಂದು ಹೇಳಿದ್ದಾರೆ.

“ಆಡಳಿತವು ಚುನಾವಣೆಗೆ ಸಂಬಂಧಿಸಿದ ವಿಲಕ್ಷಣ ಆದೇಶವನ್ನೂ ಹೊರತಂದಿದ್ದಾರೆ. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿರುವವರು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಯಮ ನಮ್ಮ ದೇಶದಲ್ಲಿ ಎಲ್ಲೂ ಇಲ್ಲ. ದ್ವೀಪದಲ್ಲಿ ಅದನ್ನೂ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಬಹುಪಾಲು ದ್ವೀಪವಾಸಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ” ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳ ನಡುವಿನ ಐತಿಹಾಸಿಕ ಸುದೀರ್ಘ ಸಂಬಂಧವನ್ನು ಮುರಿಯಲು ಆಡಳಿತಾಧಿಕಾರಿ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಬಲವಾಗಿ ಖಂಡಿಸಿದರು.

“ಇಂದು ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಸಂಘ ಪರಿವಾರದ ಕಾರ್ಯಸೂಚಿಯ ಪ್ರಾಯೋಗಿಕ ಪ್ರಯೋಗಾಲಯನ್ನಾಗಿ ಮಾಡುತ್ತಿರುವುದನ್ನು ಗಮನಿಸಬೇಕು. ಅವರು ಜನರ ಸಂಸ್ಕೃತಿ, ಭಾಷೆ, ಜೀವನ ವಿಧಾನ ಮತ್ತು ಆಹಾರವನ್ನು ತಮಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪಿಣರಾಯಿ ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ವಿ.ಡಿ.ಸತೀಸನ್ ಮಾತನಾಡಿ, “ನಾವು ಯಾವ ಆಹಾರವನ್ನು ಸೇವಿಸಬಹುದು ಎಂಬುದನ್ನು ಅವರು ನಿರ್ಧರಿಸುವುದು ಸೊಕ್ಕಿನ ನಿಲುವಾಗಿದೆ. ದ್ವೀಪಗಳು ಮತ್ತು ಬೇಪೋರ್ ನಡುವಿನ ಸರಕು ಸಾಗಣೆಯನ್ನು ಮಂಗಳೂರಿಗೆ ವರ್ಗಾಯಿಸಲು ಅವರು ಏಕಪಕ್ಷೀಯವಾಗಿ ನಿರ್ಧರಿಸಿದ್ದಾರೆ. ಇದುವರೆಗೂ ಮದ್ಯ ನಿಶೇಧ ಇದ್ದ ಸ್ಥಳದಲ್ಲಿ ಮದ್ಯಕ್ಕೆ ಅನುಮತಿಲಾಗಿದೆ. ಈ ನಿರ್ಧಾರಗಳು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳನ್ನು ಬದಿಗಿಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸುವ ಆಡಳಿತದ ದುರಹಂಕಾರವನ್ನು ಸೂಚಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಕೆಲವು ವಾರಗಳಲ್ಲಿ ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ಎದ್ದಿದ್ದು, ಸಾಮಾಜಿಕ ಜಾಲತಾಣದಲ್ಲೂ ಇದು ಪ್ರತಿಧ್ವನಿಸಿದೆ. ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಂಗಾಳದಲ್ಲಿ ಮುಂದೆಂದೂ ಸ್ವತಂತ್ರದ ಕಿಚ್ಚು ಏಳಲಾರದು ಎಂದು ಖಂದಿರವಾಗಿ ಹೇಳುವೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...