Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...