HomeಮುಖಪುಟBreaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ - ಹೋರಾಟನಿರತ ರೈತರ ಕರೆ

Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 3 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ಇದೇ ಮಾರ್ಚ್ 26 ರಂದು ಭಾರತದಾದ್ಯಂತ ಸಂಪೂರ್ಣ ಭಾರತ್ ಬಂದ್‌ಗೆ ಹೋರಾಟನಿರತ ರೈತರು ಕರೆ ನೀಡಿದ್ದಾರೆ.

ಅಖಿಲ ಭಾರತ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರೆ ಸಾಮೂಹಿಕ ಸಂಘಟನೆಗಳ ಬೆಂಬಲವನ್ನು ಕೇಳಲಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು 3 ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ಇರುವ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ ತಿಂಗಳಿನಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ನಂತರ ಜ. 26 ರಂದು ಟ್ರ್ಯಾಕ್ಟರ್‌ ರ್ಯಾಲಿಗೆ ರೈತರು ಕರೆ ನೀಡಿದ್ದರು. ಆ ಸಂದರ್ಭದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳಿಂದ ರೈತ ಹೋರಾಟಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ರಾಕೆಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ ನಂತರ ಉತ್ತರ ಭಾರತದಾದ್ಯಂತ ಪ್ರತಿ ಹಳ್ಳಿಗಳಲ್ಲೂ ಮಹಾ ಪಂಚಾಯತ್‌ಗಳನ್ನು ನಡೆಸಿ ಲಕ್ಷಾಂತರ ರೈತ ಬೆಂಬಲಿಗರನ್ನು ಒಟ್ಟಗೂಡಿಸಲಾಗುತ್ತಿದೆ. ಅಂದಿನಿಂದ ರೈತ ಹೋರಾಟ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ರೈತ ಹೋರಾಟವನ್ನು ಹತ್ತಿಕ್ಕಲು ಸರ್ಕಾರವು ಹಲವು ಅನೈತಿಕ ಮಾರ್ಗಗಳನ್ನು ಪರೋಕ್ಷವಾಗಿ ಅನುಸರಿಸುತ್ತಿದೆ. ಆದರೆ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ. ಈಗ ರೈತರು ಮತ್ತೊಮ್ಮೆ ದೇಶದಾದ್ಯಂತ ಬಂದ್ ಮಾಡಲು ಕರೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

0
ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಫೆಡರಲ್ ಬ್ಯೂರೋ...
Wordpress Social Share Plugin powered by Ultimatelysocial