Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...