Homeಕರ್ನಾಟಕಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

- Advertisement -
- Advertisement -

ಬೆಂಗಳೂರಿನ ರಂಗಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ಕಲಾವಿದರು, ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇರುವಾಗಲೂ ಅನುಮತಿ ದೊರೆಯದೇ ಇದ್ದದಕ್ಕೆ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿ ಡಿಸೆಂಬರ್ 2 ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರರು ‘ಸದಾಗ್ರಹ’ ಎಂಬ ಹೆಸರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಗೆ ಕೂಡ ಪೊಲೀಸರ ಅನುಮತಿ ದೊರೆಯುವುದು ಅನುಮಾನವಾಗಿದೆ.

ಈ ಕುರಿತು ಮಾತನಾಡಿರುವ ಪ್ರತಿಭಟನೆಯ ಆಯೋಜಕರಲ್ಲೊಬ್ಬರಾದ ಡಾ. ಹೆಚ್‌.ವಿ ವಾಸು “ಡಿಸಿಪಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಮುಖ್ಯಮಂತ್ರಿಯವರ ಹೇಳಿಕೆ ಬಂದ ನಂತರ ಏನು ಮಾಡುತ್ತಾರೆ ನೋಡಬೇಕು. ಆದರೆ, ಸದಾಗ್ರಹ ಸಭೆ ನಡೆಯುವುದಂತೂ ಖಚಿತ. 15,000 ಜನರ ಮಾರಣಹೋಮ ನಡೆದಿರುವಾಗ ಸುಮ್ಮನಿದ್ದರೆ ಕರ್ನಾಟಕಕ್ಕೇ ಅವಮಾನ” ಎಂದಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ತಪ್ಪಾಗಿದೆ ಎಂದ ಸಿಎಂ :

ರಂಗಶಂಕರದಲ್ಲಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಕಲಾವಿದ ರಮಣೀಕ್ ಸಿಂಗ್, “ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದಿದ್ದರು. ಇದೀಗ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ.

“ರಾಜ್ಯ ಸರ್ಕಾರ ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಕೆಲಸವನ್ನೂ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಇಂತಹ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯವ ಕೆಲಸ ಮಾಡುವುದಿಲ್ಲ. ನಾವು ಸಂವಿಧಾನ ಮೂಲ ಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಲ ಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿದೆ ಎಂಬುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಲು ನಾನು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆಗಳನ್ನು ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರ ಸದಾ ನಿಲ್ಲುತ್ತದೆ ಎಂಬುವುದನ್ನು ತಿಳಿಯಬಯಸುತ್ತೇನೆ. ಆದ್ದರಿಂದ ಯಾವುದೇ ಗೊಂದಲಗಳನ್ನು ಸೃಷ್ಟಿಸಬಾರದೆಂದು. ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡ ಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ಸಿಎಂ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.

ರಂಗಶಂಕರದಲ್ಲಿ ನವೆಂಬರ್ 29 ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿತ್ತು.

ಈ ಕುರಿತು ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದ ಗಾಯಕಿ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ” ಎಂದಿದ್ದರು.

ಇದನ್ನೂ ಓದಿ : ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...