Homeಮುಖಪುಟಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

- Advertisement -
- Advertisement -

ಬಲಪಂಥೀಯ ಸಂಘಟನೆಯಾದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ಬೆನ್ನಲ್ಲೇ ರಾಜಸ್ಥಾನದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿದ್ದು, ಇಂದು ರಾಜಸ್ಥಾನ ಬಂದ್‌ಗೆ ಕರ್ಣಿ ಸೇನೆ ಕರೆ ನೀಡಿದೆ.

ರಾಜಸ್ಥಾನದಲ್ಲಿ ರಜಪೂತ ನಾಯಕನ ಹತ್ಯೆಯು ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಸುಖದೇವ್ ಸಿಂಗ್ ಗೊಗಮೆಡಿ ಬೆಂಬಲಿಗರು ಜೈಪುರದ ಆಸ್ಪತ್ರೆಯ ಹೊರಭಾಗದಲ್ಲಿ ರಸ್ತೆ ತಡೆದು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟಿಸಿದ್ದಾರೆ. ಚುರು, ಉದಯಪುರ, ಅಲ್ವಾರ್ ಮತ್ತು ಜೋಧ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿವೆ.

ಆರೋಪಿಗಳ ಅಡಗು ತಾಣಗಳ ಮೇಲೆ ದಾಳಿ ನಡೆಸಿ ಶೀಘ್ರವಾಗಿ ಬಂಧಿಸಲಾಗುವುದು. ಯಾರೂ ಅಹಿತಕರ ಘಟನೆಗೆ ಆಸ್ಪದ ಕೊಡಬಾರದು. ಎಲ್ಲರೂ ಶಾಂತಿ ಕಾಪಾಡುವಂತೆ ರಾಜಸ್ಥಾನದ ಪೊಲೀಸ್ ಮುಖ್ಯಸ್ಥ ಉಮೇಶ್ ಮಿಶ್ರಾ ಮನವಿ ಮಾಡಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಕಂಡ ಬಳಿಕ ಇದೀಗ ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸುಖದೇವ್ ಸಿಂಗ್ ಗೊಗಮೆಡಿ ಈ ಮೊದಲು ಮಾತನಾಡಿರುವ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದಿನ ಸಿಎಂ ಅಶೋಕ್ ಗೆಹ್ಲೂಟ್ ಅವರು ತಮ್ಮ ಭದ್ರತೆಯನ್ನು ಕಡಿತಗೊಳಿಸಿದ್ದಾರೆ ಎಂದು ವಿಡಿಯೊದಲ್ಲಿ ಗೊಗಮೆಡಿ ಹೇಳಿಕೊಂಡಿದ್ದರು.

ಮಾಜಿ ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ರಾಜ್ಯವರ್ಧನ್ ರಾಥೋಡ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ರಾಜಸ್ಥಾನ ಜಂಗಲ್ ರಾಜ್‌ಗೆ ಮರಳಿದೆ ಎಂದು ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಶೂಟೌಟ್‌ನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಲಾಗಿದೆ. ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡಾರಾ ಕಪುರಿಸರ್ ಗೊಗಮೆಡಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ.

ಸುಖದೇವ್ ಸಿಂಗ್ ಗೊಗಮೆಡಿ ಅವರು ಲೋಕೇಂದ್ರ ಸಿಂಗ್ ಕಲ್ವಿಯವರ ರಜಪೂತ್ ಕರ್ಣಿ ಸೇನೆಯ ಭಾಗವಾಗಿದ್ದರು. ಈ ಸಂಘಟನೆ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿತ್ತು. ನಂತರ ಆಂತರಿಕ ಗಲಾಟೆಯಿಂದ ಗೊಗಮೆಡಿ ತಮ್ಮದೇ ಪ್ರತ್ಯೇಕ ಕರ್ಣಿ ಸೇನೆಯನ್ನು ಕಟ್ಟಿದ್ದರು.

ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ‘ಪದ್ಮಾವತ್’ ಸಿನಿಮಾ ವಿರೋಧಿಸಿ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣದ ನಂತರ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುವ ಗೊಗಮೆಡಿ ಬೆಳಕಿಗೆ ಬಂದಿದ್ದರು.

ಇದನ್ನು ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...