Homeಮುಖಪುಟ'ಪಾಕಿಸ್ತಾನಿ' ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

“ಮಿಯಾನ್-ಟಿಯಾನ್” ಮತ್ತು “ಪಾಕಿಸ್ತಾನಿ” ಎಂಬ ಪದಗಳನ್ನು ಬಳಸುವುದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಾಗ್ಯೂ, ಈ ಪದಗಳು ಕೆಟ್ಟ ಅಭಿರುಚಿಯದ್ದಾಗಿದೆ ಎಂದು ಅದು ಹೇಳಿದೆ. ‘ಪಾಕಿಸ್ತಾನಿ’ ಎಂದು ಕರೆಯುವುದು

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಜಾರ್ಖಂಡ್‌ನ ಚಾಸ್‌ನ ಉಪ-ವಿಭಾಗೀಯ ಕಚೇರಿಯಲ್ಲಿ ಉರ್ದು ಭಾಷಾಂತರಕಾರ ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ನ ಕಾರ್ಯಕಾರಿ ಗುಮಾಸ್ತರು ಸಲ್ಲಿಸಿದ ಕ್ರಿಮಿನಲ್ ಪ್ರಕರಣದಿಂದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ‘ಪಾಕಿಸ್ತಾನಿ’ ಎಂದು ಕರೆಯುವುದು

ಫೆಬ್ರವರಿ 11 ರ ನ್ಯಾಯಾಲಯದ ಆದೇಶದಲ್ಲಿ, “ಮೇಲ್ಮನವಿದಾರರು ಮಾಹಿತಿದಾರರನ್ನು ‘ಮಿಯಾನ್-ಟಿಯಾನ್’ ಮತ್ತು ‘ಪಾಕಿಸ್ತಾನಿ’ ಎಂದು ಕರೆಯುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಸ್ಸಂದೇಹವಾಗಿ, ಮಾಡಿದ ಹೇಳಿಕೆಗಳು ಕಳಪೆ ಅಭಿರುಚಿಯಿಂದ ಕೂಡಿವೆ.

ಆದಾಗ್ಯೂ, ಇದು ಮಾಹಿತಿದಾರರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದಿಲ್ಲ. ಆದ್ದರಿಂದ, ಮೇಲ್ಮನವಿದಾರರನ್ನು ಸೆಕ್ಷನ್ 298 ಐಪಿಸಿ ಅಡಿಯಲ್ಲಿಯೂ ಬಿಡುಗಡೆ ಮಾಡಲಾಗುತ್ತದೆ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ.” ಎಂದು ಹೇಳಿದೆ. ಐಪಿಸಿಯ ಸೆಕ್ಷನ್ 298 ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶಪೂರ್ವಕ ಉದ್ದೇಶದಿಂದ ಮಾಡಿದ ಪದಗಳು ಅಥವಾ ಸನ್ನೆಗಳ ಬಗ್ಗೆಗಿನ ಅಪರಾಧದ ಬಗ್ಗೆ ಹೇಳುತ್ತದೆ.

ಆರೋಪಿ ಹರಿ ನಂದನ್ ಸಿಂಗ್, ಬೊಕಾರೊದ ಹೆಚ್ಚುವರಿ ಜಿಲ್ಲಾಧಿಕಾರಿಯಿಂದ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿಯೊಂದನ್ನು ಕೋರಿದ್ದರು. ಈ ವೇಳೆ ಅವರಿಗೆ ಮಾಹಿತಿಯನ್ನು ನೀಡಲಾಗಿತ್ತಾದರೂ, ಅದರಿಂದ ಅವರು ತೃಪ್ತರಾಗಿರಲಿಲ್ಲ. ಈ ವೇಳೆ ಅವರು ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಹಾಗಾಗಿ, ಮೇಲ್ಮನವಿ ಪ್ರಾಧಿಕಾರವು ಭಾಷಾಂತರಕಾರರಿಗೆ ಮಾಹಿತಿಯನ್ನು ಮೇಲ್ಮನವಿದಾರರಿಗೆ ವೈಯಕ್ತಿಕವಾಗಿ ಒದಗಿಸುವಂತೆ ನಿರ್ದೇಶಿಸಿತ್ತು.

ನವೆಂಬರ್ 18, 2020 ರಂದು, ಮಾಹಿತಿದಾರರು ಮಾಹಿತಿಯನ್ನು ಹಸ್ತಾಂತರಿಸಲು ಆರೋಪಿಯ ಮನೆಗೆ ಹೋಗಿದ್ದರು. ಈ ವೇಳೆ ಆರೋಪಿ ಆರಂಭದಲ್ಲಿ ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದರು. ಅದಾಗ್ಯೂ, ನಂತರ ಮಾಹಿತಿದಾರರ ಒತ್ತಾಯದ ಮೇರೆಗೆ ಅದನ್ನು ಸ್ವೀಕರಿಸಿದರು. ಈ ವೇಳೆ ಆರೋಪಿ ತನ್ನನ್ನು ಧಾರ್ಮಿಕವಾಗಿ ನಿಂದಿಸಿದ್ದಾನೆ ಮತ್ತು ಕ್ರಿಮಿನಲ್ ಬಲಪ್ರಯೋಗ ಮಾಡಿದ್ದಾನೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದರು.

ತನಿಖೆಯ ನಂತರ, ವಿಚಾರಣಾ ನ್ಯಾಯಾಲಯವು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಆರೋಪಗಳನ್ನು ರೂಪಿಸಲು ಆದೇಶಿಸಿತ್ತು.

ಈ ಕಾರ್ಯವಿಧಾನಗಳನ್ನು ರದ್ದುಗೊಳಿಸುವಂತೆ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದ ವಿರುದ್ಧ ವ್ಯಕ್ತಿಯ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸೆಕ್ಷನ್ 353 ಹೊರತುಪಡಿಸಿ “ಶಾಂತಿ ಭಂಗವನ್ನು ಉಂಟುಮಾಡುವ ಯಾವುದೇ ಕೃತ್ಯ ಅವನ ಕಡೆಯಿಂದ ಆಗಿಲ್ಲ” ಎಂದು ಹೇಳಿರುವ ಪೀಠವು ಅವರನ್ನು ಉದ್ದೇಶಪೂರ್ವಕ ಅವಮಾನದ ಸೆಕ್ಷನ್ 504ರ ಅಪರಾಧದಿಂದ ಮುಕ್ತಗೊಳಿಸಿದೆ.

“ವಿಚಾರಣಾ ನ್ಯಾಯಾಲಯದ ಆದೇಶವನ್ನು ಸಮರ್ಥಿಸಿಕೊಂಡಿರುವ ಹೈಕೋರ್ಟ್‌ನ ಆದೇಶವನ್ನು ನಾವು ರದ್ದುಗೊಳಿಸಿದ್ದೇವೆ. ಪರಿಣಾಮವಾಗಿ ಮೇಲ್ಮನವಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸುತ್ತೇವೆ. ಮೇಲ್ಮನವಿ ಸಲ್ಲಿಸಿದವರ ವಿರುದ್ಧ ಆರೋಪಿಸಲಾದ ಎಲ್ಲಾ ಮೂರು ಅಪರಾಧಗಳಿಂದ ಅವರನ್ನು ಬಿಡುಗಡೆ ಮಾಡುತ್ತೇವೆ” ಎಂದು ಅದು ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...