ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ದಾಳಿ-ಪ್ರತಿದಾಳಿ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ. ಜಮ್ಮು ಕಾಶ್ಮೀರದಲ್ಲಿ
“ಜಮ್ಮು ಕಾಶ್ಮೀರ ಮತ್ತು ಅಂತರರಾಷ್ಟ್ರೀಯ ಗಡಿಯಾದ್ಯಂತ ರಾತ್ರಿ ಬಹುತೇಕ ಶಾಂತಿಯುತವಾಗಿತ್ತು” ಎಂದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಎರಡು ದಿನಗಳ ನಂತರ ಸೇನೆಯು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ “ಜಮ್ಮು ಕಾಶ್ಮೀರ ಇತ್ತೀಚಿನ ದಿನಗಳಲ್ಲಿ ಕಂಡ ಮೊದಲ ಶಾಂತ ರಾತ್ರಿ ಇದಾದ್ದು, ಯಾವುದೇ ಘಟನೆಗಳು ವರದಿಯಾಗಿಲ್ಲ” ಎಂದು ಅದು ಹೇಳಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ್’ ಕುರಿತು ಎರಡೂ ದೇಶಗಳ ನಡುವಿನ ಮಿಲಿಟರಿ ಸಂಘರ್ಷದಿಂದಾಗಿ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು. ಅದಾಗ್ಯೂ, ಆದಾಗ್ಯೂ, ಮೇ 10 ರಂದು, ಭಾರತ ಮತ್ತು ಪಾಕಿಸ್ತಾನ ಎರಡೂ ಕದನ ವಿರಾಮಕ್ಕೆ ಒಪ್ಪಿಕೊಂಡವು.
ಅದಾಗ್ಯೂ, ಮೇ 10 ರ ರಾತ್ರಿ, ಜಮ್ಮು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಕೆಲವು ಡ್ರೋನ್ ದಾಳಿಗಳು ವರದಿಯಾಗಿವೆ. ಆದಾಗ್ಯೂ, ಭಾರತ ಪಾಕಿಸ್ತಾನಕ್ಕೆ ಪ್ರತೀಕಾರದ ಎಚ್ಚರಿಕೆ ನೀಡಿದ ನಂತರ, ಉಲ್ಲಂಘನೆಗಳು ನಿಂತುಹೋದವು ಎಂದು ವರದಿಯಾಗಿವೆ.
ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತ ಯಶಸ್ವಿಯಾಗಿ ನಡೆಸಿದ ಆಪರೇಷನ್ ಸಿಂಧೂರದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.
ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು 26 ಜನರನ್ನು ಕ್ರೂರವಾಗಿ ಕೊಂದಿದ್ದರು. ಅದಕ್ಕೆ ಪ್ರತಿಕಾರವಾಗಿ ಮೇ 7 ರಂದು, ಭಾರತೀಯ ಪಡೆಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ನಿಖರ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.
ಇದರ ನಂತರದ ದಿನಗಳಲ್ಲಿ, ಭಾರತವು ಪಾಕಿಸ್ತಾನದ ಹಲವಾರು ಪ್ರಮುಖ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್
ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್