HomeUncategorizedರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ ಎಂದು ‘ಒಂಟೆ ಸವಾರಿ’ ಮಾಡಿ ಪ್ರತಿಭಟನೆ

ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ ಎಂದು ‘ಒಂಟೆ ಸವಾರಿ’ ಮಾಡಿ ಪ್ರತಿಭಟನೆ

ಅವರ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಯು ಇನ್ನೂ ನಡೆಯುತ್ತಿದ್ದು, ಅವರಿನ್ನೂ ಆರೋಪ ಮುಕ್ತವಾಗಿಲ್ಲ.

- Advertisement -
- Advertisement -

ಲೈಂಗಿಕ ಹಗರಣದಲ್ಲಿ ಸಿಲುಕಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಅವರ ಬೆಂಬಲಿಗರು ಒಂಟೆಗಳ ಮೆರವಣಿಗೆ ಮಾಡಿ ಗುರವಾರ ಪ್ರತಿಭಟಿಸಿದ್ದಾರೆ.

ಸರ್ಕಾರಿ ಕೆಲಸ ನೀಡುತ್ತೇನೆ ಎಂದು ಪುಸಲಾಯಿಸಿ ಯುವತಿಯನ್ನು ಶಾಸಕ ರಮೇಶ್‌ ಜಾರಕಿಹೊಳಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿ ಕಾರಣಕ್ಕಾಗಿ ಅವರ ವಿರುದ್ದ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಜಾರಕಿಹೊಳಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಜಾಮೀನು ಸಿಕ್ಕರೂ ಬಿಡುಗಡೆಯಿಲ್ಲ!-ಹೈಕೋರ್ಟ್‌ ಕದ ತಟ್ಟಿದ ವಿದ್ಯಾರ್ಥಿಗಳು

ಅವರ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಯು ಇನ್ನೂ ನಡೆಯುತ್ತಿದೆ. ಅವರಿನ್ನೂ ಪ್ರಕರಣದಿಂದ ಆರೋಪ ಮುಕ್ತವಾಗಿಲ್ಲ. ವಿರೋಧ ಪಕ್ಷಗಳು ಅತ್ಯಾಚಾರ ಆರೋಪಿ ರಮೇಶ್‌ ಜಾರಕಿಹೊಳಿ ತನ್ನ ಪ್ರಭಾವ ಬಳಸಿ ಪ್ರಕರಣದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸುತ್ತಲೆ ಇದ್ದಾರೆ. ಈ ನಡುವೆ ರಾಜ್ಯದಲ್ಲಿ ಆಡಳಿತರೂಢ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟಗಳು ನಡೆಯುತ್ತಿದ್ದ, ನಾಯಕತ್ವ ಬದಲಾವಣೆಯ ಚರ್ಚೆಯಾಗುತ್ತಿದೆ.

ಈ ನಡುವೆ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಅವರ ಬೆಂಬಲಿಗರು ಒಂಟೆಗಳ ಸವಾರಿ ಮಾಡುವ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಸಮಯಲ್ಲಿ ಜಾರಕಿಹೊಳಿ ಅವರಿಗೆ ನ್ಯಾಯ ಸಿಗಬೇಕು, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿ ಎಂದು ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ: ಕೊರೊನಾ ತಂದೆಳೆದ ಕೃಷಿ ಸಂಕಷ್ಟಗಳು ಮತ್ತು ಪ್ರಭುತ್ವದ ಹೊಣೆಗಾರಿಕೆ: ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...