SDPI

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಇದನ್ನೂ ಓದಿ: ಎನ್​ಐಎ ತನಿಖೆಗೆ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣ

ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here