Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...