Homeಮುಖಪುಟಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಅಖಿಲೇಶ್‌ ಯಾದವ್‌

- Advertisement -
- Advertisement -

ಲಖನೌದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್‍ಯಾಲಿಯಲ್ಲಿ ಸಿಎಎ ಕುರಿತು ಧೈರ್‍ಯವಿದ್ದರೆ ಚರ್ಚೆಗೆ ಬನ್ನಿ ಎಂದು ಗೃಹ ಸಚಿವ ಅಮಿತ್ ಸವಾಲು ಹಾಕಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಗೆ ಸಿದ್ಧ ಎಂದು  ಸವಾಲು ಸ್ವೀಕರಿಸಿದ್ದಾರೆ. ಆದರೆ ಚರ್ಚಾ ವಿಷಯ ಮಾತ್ರ ಅಭಿವೃದ್ಧಿಯಾಗಿರಲಿ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಅಗಲಿದ ನಾಯಕ ಜಾನೇಶ್ವರ್ ಮಿಶ್ರಾ ಅವರ 10 ನೇ ನಿಧನ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚರ್ಚೆಯ ಸ್ಥಳ ಮತ್ತು ಸಮಯವನ್ನು ಬಿಜೆಪಿ ನಿರ್ಧರಿಸಲಿ ಮತ್ತು ನಾನು ಅಲ್ಲಿಗೆ ತಲುಪುತ್ತೇನೆ. ಆದರೆ ಚರ್ಚೆಯ ವಿಷಯವೆಂದರೆ ಅಭಿವೃದ್ಧಿ, ಉದ್ಯೋಗ, ಯುವಜನರು, ರೈತರು ಇತ್ಯಾದಿಗಳಾಗಿರಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಅಲ್ಲದೇ ನೈಜ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ವಿಭಜಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಅಖಿಲೇಶ್ ಯಾದವ್‌ ಆರೋಪಿಸಿದ್ದಾರೆ.

ಸಿಎಎ ಕುರಿತು ಚರ್ಚೆ ನಡೆಸುವಂತೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಇತರ ವಿರೋಧ ಪಕ್ಷಗಳ ಮುಖಂಡರಿಗೆ ಅಮಿತ್‌ ಶಾ ಮಂಗಳವಾರ ಸವಾಲು ಹಾಕಿದ್ದರು.

ಷಾ ಅವರ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅಖಿಲೇಶ್ ಬಿಜೆಪಿ ಮುಖಂಡರರು ಬಳಸುವ ಭಾಷೆಯನ್ನು ನೋಡಿದರೆ ಅವರು ರಾಜಕಾರಣಿಗಳು ಎನಿಸುವುದಿಲ್ಲ. ಸಿಎಎಯನ್ನು ಸಮಾಜವಾದಿ ಪಕ್ಷ ಮಾತ್ರ ವಿರೋಧಿಸುತ್ತಿಲ್ಲ. ಬದಲಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾಮಾನ್ಯ ನಾಗರಿಕರು ಸಹ ಈ ‘ತಾರತಮ್ಯ’ ಕಾನೂನನ್ನು ವಿರೋಧಿಸಿ ರಸ್ತೆಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ ಬಿಜೆಪಿ ನಾಗರಿಕರ ವಿರುದ್ಧ ಎಷ್ಟು ಸಮಯದವರೆಗೆ ತಾರತಮ್ಯವನ್ನು ಮುಂದುವರಿಸುತ್ತದೆ?” ಎಂದು ಯಾದವ್ ಪ್ರಶ್ನಿಸಿದ ಅವರು “ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಅಮಿತ್‌ ಶಾರವರ ಸವಾಲಿಗೆ ಬಹಳಷ್ಟು ಜನ ಟ್ರೋಲ್‌ ಮಾಡಿದ್ದಾರೆ. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್‌ “ಶಾಹೀನ್‌ಬಾಗ್‌ನ ದಬಾಂಗ್ ದಾದಿಗಳೊಂದಿಗೆ ಸಿಎಎ ಕುರಿತು ಸಾರ್ವಜನಿಕ ಚರ್ಚೆಯನ್ನು ನಡೆಸಲು, ಶಾಹೀನ್ ಬಾಗ್‌ನಲ್ಲಿ ಕೆಲವು ದಿನಗಳನ್ನು ಕಳೆಯಲು ಧೈರ್ಯವಿದೆಯೇ ಅಮಿತ್‌ ಶಾ” ಎಂದು ಟ್ವೀಟ್‌ ಮಾಡಿದ್ದಾರೆ.

ಐಎಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಧಿಕಾರಿ ಕಣ್ಣನ್‌ ಗೋಪಿನಾಥ್‌ “ಪ್ರೀತಿಯ ಅಮಿತ್‌ಶಾ, ನೀವು ಸಿಎಎ ಕುರಿತು ಚರ್ಚೆ ಮಾಡಲು ಬಯಸಿದ್ದೀರಿ ಎಂದು ಕೇಳಿದೆ. “ನಿಮ್ಮ ಕೈಲಾದ ಮಟ್ಟದಲ್ಲಿ ನೀವು ಚರ್ಚಿಸಲು ಪ್ರಯತ್ನಿಸಿದರೆ ಆ ತಾಜಿಂದರ್‌ ಬಗ್ಗ ಎಂಬ ಹುಡುನೊಂದಿಗೆ ಚರ್ಚೆ ಮಾಡಿ ಎಂದು ನಾನು ಸಲಹೆ ನೀಡುತ್ತೇನೆ. ಯಾರು ಗೆದ್ದರೂ, ನನ್ನ ಕಡೆಯಿಂದ ಬಣ್ಣ ಪುಸ್ತಕ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪೋಲ್‌ ಒಂದನ್ನು ಕ್ರಿಯೇಟ್‌ ಮಾಡಿ, “ಸಿಎಎ, ಎನ್‌ಆರ್‌ಸಿ ಕುರಿತು ಕನ್ನಯ್ಯ ಕುಮಾರ್‌ರವರೊಂದಿಗೆ ಚರ್ಚೆ ನಡೆಸಲು ಅಮಿತ್‌ ಶಾಗೆ ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಹೌದು ಎಂದು ಶೇ.12% ಜನ ಹೇಳಿದರೆ, ಇಲ್ಲ ಅವರಿಗೆ ಭಯವಿದೆ ಎಂದು 88% ಜನ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...