Homeಮುಖಪುಟಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

ಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲು ಕೆನಡಾದ ಪೊಲೀಸರು ಸಜ್ಜಾಗಿದ್ದಾರೆ. ಶೂಟರ್‌ಗಳು ಕೆನಡಾ ಪೊಲೀಸರ ಕಣ್ಗಾವಲಿನಲ್ಲಿದ್ದು, ಶೀಘ್ರ ಬಂಧನ ನಡೆಯಲಿದೆ ಎನ್ನಲಾಗಿದೆ.

ದಿ ಗ್ಲೋಬ್ ಮತ್ತು ಮೇಲ್ ಪತ್ರಿಕೆಯ ಪ್ರಕಾರ, ಶಂಕಿತರು ಪ್ರಸ್ತುತ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಮತ್ತು ಕೆಲವೇ ವಾರಗಳಲ್ಲಿ ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಇಬ್ಬರು ಶಂಕಿತ ಹಂತಕರು ನಿಜ್ಜರ್ ಹತ್ಯೆಯ ನಂತರ ಕೆನಡಾವನ್ನು ತೊರೆದಿಲ್ಲ ಮತ್ತು ತಿಂಗಳುಗಳಿಂದ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ ಎಂದು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಹಂತಕರು ಮತ್ತು ಭಾರತ ಸರ್ಕಾರದೊಂದಿಗೆ ಅವರ ಸಂಪರ್ಕದ ಬಗ್ಗೆ ಪೊಲೀಸರು ವಿವರಗಳನ್ನು ಬಹಿರಂಗಪಡಿಸಲಿದ್ದಾರೆ ಎಂದು ವರದಿ ಹೇಳಿದೆ.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಕಳೆದ ತಿಂಗಳು ವೀಸಾ ಸೇವೆಗಳನ್ನು ಭಾರತವು ಪುನರಾರಂಭಿಸಿತ್ತು.

ಇದರ ಬೆನ್ನಲ್ಲೇ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಸಿಖ್ಖ್ ಪ್ರತೇಕತವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆ ಮಾಡುವ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದರು. ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆಗೆ ಸಂಬಂಧಿಸಿ ಗುಜರಾತ್‌ನ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಆತನಿಗೆ ಬಂಧಿಸಿ ಅಮೆರಿಕ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಗುಜರಾತ್‌ನ ನಿಖಿಲ್‌ ಗುಪ್ತಾ ಭಾರತದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಇದಲ್ಲದೆ ಭಾರತದ ಅಧಿಕಾರಿಯ ಸಹಾಯದಿಂದ ಗುಪ್ತಾ ಹಂತಕನಿಗೆ ಸಿಖ್ ಪ್ರತ್ಯೇಕತಾವಾದಿ ನಾಯಕನನ್ನು ಕೊಲ್ಲಲು 1,00,000 ಅಮೆರಿಕನ್ ಡಾಲರ್ ಪಾವತಿಸಲು ಒಪ್ಪಿಕೊಂಡಿದ್ದಾನೆ. ಜೂ.9, 2023 ರಂದು ಗುಪ್ತಾ ಕೊಲೆಗೆ ಮುಂಗಡ ಪಾವತಿಯಾಗಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಯುಸಿಯಲ್ಲಿ 15,000 ಅಮೆರಿಕನ್ ಡಾಲರ್ ನ್ನು ಹಂತಕನಿಗೆ ಪಾವತಿಗೆ ವ್ಯವಸ್ಥೆ ಮಾಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ನಿಜ್ಜರ್‌ ಹತ್ಯೆ ಬಗ್ಗೆ ಕೆನಡಾವು ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದ್ದರು.

ಇದನ್ನು ಓದಿ: ‘ಕೇಸರಿಮಯ ಪಾಕಿಸ್ತಾನ’: ಭಾರತದಲ್ಲಿನ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಜೂಲಿಯೊ ರಿಬೇರೊ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...