Homeಮುಖಪುಟಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಂದ ಕೆಳಗಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ (ಜ.8) ಒಟ್ಟಾವೊದಲ್ಲಿ ಲಿಬರಲ್‌ ಪಕ್ಷದ ಕಾಕಸ್ ಸಮಿತಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಒಂದು ತಿಂಗಳಿನಿಂದ ಟ್ರುಡೋ ನೇತೃತ್ವದ ಲಿಬರಲ್‌ ಪಕ್ಷದ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಉಂಟಾಗಿದೆ. ಟ್ರುಡೋ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೋ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೋ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಟ್ರುಡೋ ಸರ್ಕಾರದ ಮಂತ್ರಿಗಳು ಮತ್ತು ಅಧಿಕಾರಿಗಳು ಆರೋಪಿಸಿದ್ದಾರೆ. ಇದು ದ್ವಿಪಕ್ಷೀಯ ಸಂಬಂಧ ಹಾಳಾಗಲು ಕಾರಣವಾಗಿದೆ. ಈ ನಡುವೆ ಟ್ರುಡೋ ರಾಜೀನಾಮೆ ಸುದ್ದಿ ಮಹತ್ವ ಪಡೆದುಕೊಂಡಿದೆ.

ಕೆನಡಾದ ಹೌಸ್ ಆಫ್ ಕಾಮನ್ಸ್‌ನಲ್ಲಿ ಲಿಬರಲ್ ಪಕ್ಷದ 153 ಸಂಸದರಿದ್ದಾರೆ. ಈ ಪೈಕಿ 20ಕ್ಕೂ ಅಧಿಕ ಮಂದಿ ಪ್ರಧಾನಿ ಟ್ರುಡೋ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕೆ ಸಂಭವನೀಯ ಮುಜುಗರ ತಪ್ಪಿಸಿಕೊಳ್ಳಲು ಟ್ರುಡೋ ರಾಜೀನಾಮೆ ಮುಂದಾಗಿದ್ದಾರೆ ಎಂದು ವರದಿಗಳು ವಿವರಿಸಿವೆ.

ಇದನ್ನೂ ಓದಿ : ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...