Homeಅಂತರಾಷ್ಟ್ರೀಯಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ" - ಜಸ್ಟಿನ್ ಟ್ರೂಡೊ

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಭಾರತೀಯ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಬಹಿರಂಗ ಬೆಂಬಲ ನೀಡಿ ಭಾರತದ ಸರ್ಕಾರದ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಈಗ ಮತ್ತೊಮ್ಮೆ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೆ ಇಂದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದಾರೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಮಂಗಳವಾರ ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದರು.

ಭಾರತದ ರೈತರು ನಡೆಸುತ್ತಿರುವ ಹೋರಾಟಕ್ಕೆ ದೇಶ-ವಿದೇಶದಿಮದ ವ್ಯಾಪಕ ಬೆಂಬಲ ಹರಿದುಬರುತ್ತಿದೆ. ಇಂಗ್ಲೆಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೆಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೆಂಡ್‌‌‌‌ನ 36 ಸಂಸದರ ಬೆಂಬಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...