ಖಲಿಸ್ತಾನ್ ಪರ ನಾಯಕನ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾದ ಆರೋಪಗಳು ಗಂಭೀರವಾಗಿದ್ದು, ಈ ಕುರಿತು ಸಂಪೂರ್ಣವಾಗಿ ತನಿಖೆಯಾಗಬೇಕು ಎಂದು ಶ್ವೇತಭವನ ಹೇಳಿದೆ.
ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಕೊಲ್ಲಲ್ಪಟ್ಟರು. ಭಾರತವು ನಿಜ್ಜರನ್ನು 2020ರಲ್ಲಿ ಭಯೋತ್ಪಾದಕ ಎಂದು ಘೋಷಿಸಿತ್ತು.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಕಳೆದ ವಾರ ಕೆನಡಾ ಮಾಡಿದ ಆರೋಪಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಶ್ವೇತಭವನದಲ್ಲಿ ಜಾನ್ ಕಿರ್ಬಿ ಹೇಳಿದ್ದಾರೆ. ವಿಷಯದ ಬಗ್ಗೆ ಚರ್ಚಿಸಲಾಯಿತು. ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಲು ನಾವು ಖಂಡಿತವಾಗಿಯೂ ಆ ಎರಡು ದೇಶಗಳಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಕಿರ್ಬಿ ಹೇಳಿದ್ದಾರೆ.
ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಈ ಆರೋಪಗಳು ಗಂಭೀರವಾಗಿವೆ, ಅವುಗಳನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕಾಗಿದೆ ಮತ್ತು ಆ ತನಿಖೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ನಾವು ಭಾರತವನ್ನು ಒತ್ತಾಯಿಸುತ್ತೇವೆ ಎಂದು ಕಿರ್ಬಿ ಹೇಳಿದ್ದಾರೆ.
ಉಪ ವಕ್ತಾರ ವೇದಾಂತ್ ಪಟೇಲ್ ಈ ಕುರಿತು ಮಾತನಾಡಿ, ಕೆನಡಾಗೆ ಈ ಕುರಿತು ತನಿಖೆಗೆ ಸಹಕರಿಸಲು ಭಾರತ ಸರ್ಕಾರವನ್ನು ನಾವು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನಾವು ಈ ಆರೋಪಗಳನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ನಾವು ನಮ್ಮ ಕೆನಡಾದ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೆನಡಾದೊಂದಿಗೆ ಸಹಕರಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಪಟೇಲ್ ಹೇಳಿದ್ದಾರೆ.
ಇದನ್ನು ಓದಿ: NDAಯಿಂದ ಮೈತ್ರಿ ಪಕ್ಷಗಳೆಲ್ಲ ಹೊರಬಂದಿದೆ, ಈಗ ಇರುವುದು ಕೇವಲ ಸಿಬಿಐ, ಇಡಿ, ಐಟಿ ಮಾತ್ರ: ಕೆಟಿ ರಾಮರಾವ್


