Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...