Homeಕರ್ನಾಟಕರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

ರೋಹಿತ್‌‌ ಚಕ್ರತೀರ್ಥ ಮರು ಪರಿಷ್ಕರಣಾ ಸಮಿತಿಯನ್ನು ಕೂಡಲೆ ರದ್ದುಗೊಳಿಸಿ- ‘ಜಾಗೃತ ನಾಗರಿಕರು, ಕರ್ನಾಟಕ’

- Advertisement -
- Advertisement -

ರೋಹಿತ್‌‌ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಹಿಂದಿನ ಪಠ್ಯಕ್ರಮಗಳನ್ನು ಮುಂದುವರೆಸಬೇಕು ಎಂದು ‘ಜಾಗೃತ ನಾಗರಿಕರು, ಕರ್ನಾಟಕ’ ಬುಧವಾರ ನಿರ್ಣಯಗಳನ್ನು ಅಂಗೀಕರಿಸಿದೆ. ಬೆಂಗಳೂರಿನ ಗಾಂಧೀ‌ ಭವನದಲ್ಲಿ
ಆಯೋಜಿಸಲಾಗಿದ್ದ ಈ ಸಭೆಯಲ್ಲಿ, ಶಿಕ್ಷಣ ತಜ್ಞರು, ಪ್ರಾಧ್ಯಪಕರು, ವಿದ್ಯಾರ್ಥಿ ಸಂಘಗಗಳ ಪ್ರತಿನಿಧಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಶಾಲಾ ಸಂಘಗಳ ಪ್ರತಿನಿಧಿಗಳು ಸೇರಿದಂತೆ ನಾಡಿನ ಹಲವಾರು ಗಣ್ಯರು ಹಾಜರಿದ್ದರು.

“ಪಠ್ಯ ಪುಸ್ತಕ ರಚನೆ, ಪಠ್ಯ ಪುಸ್ತಕ ಪರಿಷ್ಕರಣೆ, ಪರಿಷ್ಕರಣೆಯ ಪರಿಶೀಲನೆ” ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ, ಸಮಾಲೋಚನೆ ನಡೆಯಿತು. ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಎಚ್.ಎಸ್. ರಾಘವೇಂದ್ರ ರಾವ್, ರಾಜೇಂದ್ರ ಚೆನ್ನಿ, ವಸುಂಧರಾ ಭೂಪತಿ, ಬಿ.ಟಿ. ಲಲಿತಾ ನಾಯಕ್, ಟಿ.ಆರ್. ಚಂದ್ರಶೇಖರ್, ಪ್ರಜ್ವಲ್ ಶಾಸ್ತ್ರಿ, ವಿ.ಪಿ. ನಿರಂಜನಾರಾಧ್ಯ, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಬಿ. ರಾಜಶೇಖರಮೂರ್ತಿ, ಬಿ. ಶ್ರೀಪಾದ್ ಭಟ್ ಮತ್ತಿತರರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾಲೋಚನೆ ಸಭೆಯ ನಂತರ ಭಾಗವಹಿಸಿದವರ ಅಭಿಪ್ರಾಯಗಳ ಆಧಾರದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, “ರೋಹಿತ ಚಕ್ರತೀರ್ಥ ಅಧ್ಯಕ್ಷತೆಯ ಮರು ಪರಿಷ್ಕರಣಾ ಸಮಿತಿಯನ್ನು ಈ ಕೂಡಲೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ಕೊಡಬೇಕು” ಎಂದು ಸಭೆಯು ಅಗ್ರಹಿಸಿದೆ.

ಅಲ್ಲದೆ, ಈ ಹಿಂದಿನ ಪಠ್ಯಕ್ರಮವನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಗಿದ್ದು, ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕರು ಜೊತೆಗೂಡಿ ‘ಮಾದರಿ ಪರ್ಯಾಯ ಪಠ್ಯಕ್ರಮ’ವನ್ನು ರೂಪಿಸಬೇಕು ಎಂದು ಸಭೆಯು ನಿರ್ಣಯಿಸಿದೆ.

ಇದನ್ನೂ ಓದಿ: ನಾಗೇಶ್‌ರವರನ್ನು ನಾಗ್ಪುರದ RSS ದಾರಿ ತಪ್ಪಿಸಿದೆಯೇ? ದೇವನೂರ ಮಹಾದೇವ ಪ್ರಶ್ನೆ

“ವಿದ್ಯಾರ್ಥಿಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಚರ್ಚೆ, ಸಂವಾದ ಹಮ್ಮಿಕೊಳ್ಳಬೇಕು. ಶಿಕ್ಷಣದ ಭಾಗೀದಾರರಾದ ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಅವರಿಗೆ ಈ ವಿವಾದಿತ ಪಠ್ಯಕ್ರಮ ಪರಿಶೀಲನಾ ಸಮಿತಿಯ ಆಯ್ಕೆಗಳ ಅಪಾಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಭೆಯು ನಿರ್ಣಯ ತೆಗೆದುಕೊಂಡಿದೆ.

ಮಕ್ಕಳಿಗೆ ಸಕಾಲದಲ್ಲಿ ಪಠ್ಯ ಪುಸ್ತಕ ದೊರಕಿಸಿಕೊಡುವ ಬದಲು ವಿವಾದ ಎಬ್ಬಿಸಿ ಪುಸ್ತಕ ಸಿಗದಂತೆ ಸರಕಾರವೇ ಮಾಡಿರುವುದನ್ನು ಸಮಾಲೋಚನಾ ಸಭೆಯು ಖಂಡಿಸಿದ್ದು, “ನೂರಾರು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾರದ ಸರಕಾರ ಪಠ್ಯ ಪುಸ್ತಕಗಳ ಮುದ್ರಣ,ಮರು ಮುದ್ರಣ ದ ಹೆಸರಿನಲ್ಲಿ ಕೋಟಿ ಗಟ್ಟಲೆ ಜನರ ತೆರಿಗೆ ಹಣವನ್ನು ಅಪವ್ಯಯ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Rohit committee must be dismissed with an immediate effect. And new committee should be formed from experts personals including lady, dalit, Obc, minority, and from general.

  2. ರೋಹಿತ್ ಚಕ್ರತೀರ್ಥ ಕಮಿಟಿಯನ್ನು ರದ್ದು ಮಾಡಿ ಮತ್ತು ಶಿಕ್ಷಣ ಸಚಿವರನ್ನು ವಜಾ ಮಾಡಬೇಕು. ಇದು, ಈ ಸರ್ಕಾರ ತಾನೇ ಮಾಡಿಕೊಂಡ ತಪ್ಪಿನ ಚಿಕ್ಕ ಪ್ರಾಯಶ್ಚಿತ್ತ.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...