Homeಕರ್ನಾಟಕLKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

- Advertisement -
- Advertisement -

ಎಲ್‍ಕೆಜಿ, ಯುಕೆಜಿ ಸೇರಿದಂತೆ ಏಳನೆ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್ ನಡೆಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಒಂದರಿಂದ 7ನೆ ತರಗತಿಯ ವರೆಗೆ ಆನ್‍ಲೈನ್ ಕ್ಲಾಸ್ ನಡೆಯುವುದಿಲ್ಲ, ಈ ಬಗ್ಗೆ ಶೀಘ್ರವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದರು.

ಈ ಹಿಂದೆ ಎಲ್‍ಕೆಜಿಯಿಂದ ಐದನೆ ತರಗತಿಯ ವರೆಗೆ ಆನ್‍ಲೈನ್ ಕ್ಲಾಸ್ ನಡೆಸಬಾರದು ಎಂದು ನಿರ್ಧರಿಸಲಾಗಿತ್ತು. ಈಗ ಅದನ್ನು ಏಳನೆ ತರಗತಿಯವರೆಗೆ ವಿಸ್ತರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಚಿವ ಸಂಪುಟ ಸಭೆ ಈ ನಿರ್ಧಾರಕ್ಕೆ ಬಂದಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಈ ಪರೀಕ್ಷಗಳ ದಿನಾಂಕಗಳು ಯಾವುದೆ ಕಾರಣಕ್ಕೂ ಬದಲಾಗುವುದಿಲ್ಲ, ಅದು ನಿಗದಿಯಂತೆ ನಡೆಯುತ್ತದೆ ಎಂದು ಹೇಳಿದರು.


ಓದಿ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...