Homeಕರ್ನಾಟಕಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

ಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ದಿನದಿಂದ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ಲೋಕಸಭಾ ಸೆಕ್ರೆಟರಿಯೇಟ್‌ ಪ್ರಕಟಣೆ ಹೊರಡಿಸಿದ್ದಾರೆ. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೂ ಈವರೆಗೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿಲ್ಲ. ಇದು ನೆಹರುಗೆ ಒಂದು ನ್ಯಾಯ, ಗಾಂಧಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿಸಿದೆ.

ನ್ಯಾಯಾಲಯವು ಜನಪ್ರತಿನಿಧಿಗೆ ಆರೋಪಿತ ಎಂದು ಹೇಳಿದ ದಿನದಿಂದಲೇ ಅವರ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎನ್ನುವುದಾದರೆ, ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಂತೆ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಶಾಸಕ ಸ್ಥಾನವನ್ನೂ ರದ್ದುಗೊಳಿಸಬೇಕಿತ್ತು. ಆದರೆ ಇಲ್ಲಿ ಬಿಜೆಪಿ ಶಾಸಕನಿಗೆ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅದಕ್ಕೆ ತಡೆಯಾಜ್ಞೆ ತರಲು ಹೈಕೋರ್ಟಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಾಯಕನಿಗೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವೇ ಒಂದು ತಿಂಗಳ ಕಾಲಾವಕಾಶ ನೀಡಿರುವಾಗ, ಸಂಸತ್ತು ಅದಕ್ಕೆ ಅವಕಾಶ ನೀಡದೇ ತಕ್ಷಣವೇ ಅವರ ಸಂಸತ್ ಸ್ಥಾನವನ್ನು ರದ್ದುಗೊಳಿಸಿದೆ.

ರಾಹುಲ್‌ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಪ್ರಜಾಪ್ರಭುತ್ವದದ ಬಗೆಗಿನ ಟೀಕೆ ವಿಚಾರಕ್ಕೆ ಆಡಳಿತರೂಢ ಬಿಜೆಪಿ ಪಕ್ಷ ಕ್ಷಮೆ ಕೇಳುವಂತೆ ಪಟ್ಟುಹಿಡಿಯಿತು. ಆದರೆ ರಾಹುಲ್‌ ಗಾಂಧಿ ಅವರು, ಕ್ಷಮೆ ಕೇಳುವ ತಪ್ಪುನ್ನು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ, ನನಗೆ ಅದರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿ ಎಂದು ಕೇಳಿದ್ದರು. ಆದರೆ ಬಿಜೆಪಿ ಅದಕ್ಕೆ ಅವಕಾಶ ನೀಡದೇ ರಾಹುಲ್ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಯಿತು.

ರಾಹುಲ್ ಅನರ್ಹತೆಗೆ ಕಾರಣ

ಚುನಾವಣಾ ಭಾಷಣಗಳಲ್ಲಿ ಆರೋಪ ಪ್ರತ್ಯಾರೋಪ ಮಾಡುವುದು ಸಾಮಾನ್ಯ, ಆದರೆ ರಾಹುಲ್ 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಮಾತನಾಡುವಾಗ, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ವಿಚಾರವಾಗಿ ಇದೀಗ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್‌ ನ್ಯಾಯಾಲಯವು ತಪ್ಪಿತಸ್ತ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡದೆ.

ನೆಹರು ಓಲೆಕಾರ್ ಅನರ್ಹತೆ ಯಾಕಿಲ್ಲ?

ನೆಹರು ಓಲೆಕಾರ್

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ 2023 ಫೆಬ್ರುವರಿಯಲ್ಲಿಯೇ ಎರಡು ವರ್ಷ ಜೈಲು ‌ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ಅವರು ಸ್ವಜನ ಪಕ್ಷಪಾತ ಮಾಡಿ, ಕಾಮಗಾರಿಯನ್ನು ಪುತ್ರರಿಗೇ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್, ಶಾಸಕ ನೆಹರು ಓಲೆಕಾರ್, ಇಬ್ಬರು ಪುತ್ರರಾದ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರಿಗೆ ಭ್ರಷ್ಟಾಚಾರ ತಡೆ ಕಾಯಿದೆ ಅಡಿ ಶಿಕ್ಷೆ ಪ್ರಕಟಿಸಲಾಗಿದೆ. ಶಾಸಕ ಹಾಗೂ ಅವರ ಪುತ್ರರಿಗೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಎರಡು ಸಾವಿರ ರೂಪಾಯಿ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಅವರಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ.

ನೆಹರು ಓಲೆಕಾರ್‌ ಅವರಿಗೆ ಶಿಕ್ಷೆ ಪ್ರಕಟವಾಗಿ ಎರಡು ತಿಂಗಳ ಕಳೆಯುತ್ತಾ ಬಂದರೂ ಅವರ ಶಾಸಕ ಸ್ಥಾನ ರದ್ದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿಲ್ಲ.  ಅವರು ತಮ್ಮ ವಿರುದ್ಧದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...