Homeಕರ್ನಾಟಕರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ - ಸಚಿವ ಮುನಿಯಪ್ಪ ಭರವಸೆ

ರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ – ಸಚಿವ ಮುನಿಯಪ್ಪ ಭರವಸೆ

- Advertisement -
- Advertisement -

ಬಿಪಿಎಲ್‌ ಕಾರ್ಡ್‌ ಇರುವ ರಾಜ್ಯದ ಎಲ್ಲ ಅರ್ಹ ಪಡಿತರದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಸೋಮವಾರ ತಿಳಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ರದ್ದಾಗಿರುವ ಕಾರ್ಡ್‌ಗಳನ್ನು ಪುನಃ ಸಕ್ರಿಯಗೊಳಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಅವರು ಮಾಧ್ಯಮದ ಜೊತೆಗೆ ಹೇಳಿದ್ದಾರೆ. ರದ್ದಾದ ಬಿಪಿಎಲ್‌ ಕಾರ್ಡ್‌

“ಒಂದೂವರೆ ತಿಂಗಳ ಹಿಂದೆ ರದ್ದುಪಡಿಸಿದ್ದ ಎಲ್ಲ ರೇಷನ್‌ ಕಾರ್ಡ್‌ಗಳನ್ನು ನವೆಂಬರ್ 28 ರೊಳಗೆ ಮರು ಸಕ್ರಿಯಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದು, ಆ ಕಾರ್ಯ ಭರದಿಂದ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಯಾವುದೇ ಕಾರಣಕ್ಕೂ ಪಡಿತರ ತಪ್ಪಿಸುವುದಿಲ್ಲ. ರಾಜ್ಯ ಸರಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಕಾರ್ಡ್‌ ರದ್ದುಗೊಂಡಿದ್ದರಿಂದ ಕಳೆದ ಎರಡು ತಿಂಗಳಿಂದ ಸಿಗದೇ ಇರುವ ಎಲ್ಲ ಸೌಲಭ್ಯಗಳು ದೊರೆಯಲಿವೆ. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ತಪ್ಪಿ ಹೋಗಬಾರದು. ಒಂದು ವೇಳೆ ತಪ್ಪಿ ಹೋಗಿದ್ದರೆ, ವಾಪಸ್‌ ಕೊಡಲಾಗುವುದು” ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ ಎಂದು ವಿಜಯ ಕರ್ನಾಟಕ ಪತ್ರಿಕೆ ವರದಿ ಮಾಡಿದೆ. ರದ್ದಾದ ಬಿಪಿಎಲ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಡ್‌ ರದ್ದಾದ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಫಲಾನುಭವಿಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸುವ ಬದಲಿಗೆ ಹಳೇ ಕಾರ್ಡ್‌ ನಂಬರ್‌ ನಮೂದಿಸಿ ಪಡಿತರ ಪಡೆಯಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಎಂದಿನಂತೆ ಬಿಪಿಎಲ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳು ದೊರೆಯಲಿವೆ. ಸದ್ಯ, ಅಕ್ರಮವಾಗಿ ಕಾರ್ಡ್‌ಗಳನ್ನು ಹೊಂದಿದ ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ಧಾರ ಮಾಡಿಲ್ಲ. ಮೊದಲು ರದ್ದಾದ ಅರ್ಹರ ಪಡಿತರ ಕಾರ್ಡ್‌ಗಳನ್ನು ಮರು ಸಕ್ರಿಯಗೊಳಿಸುದೇ ಸರಕಾರದ ಗುರಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್‌ಗಳ ರದ್ದತಿಯ ಸುತ್ತ ನಡೆಯುತ್ತಿರುವ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಪಡಿಸುವುದನ್ನು ಖಾತ್ರಿಪಡಿಸಿಕೊಂಡು, ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಬಾರದು ಎಂದು ಸರ್ಕಾರ ಒತ್ತಿ ಹೇಳಿದೆ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳು ಕಂಡುಬಂದಲ್ಲಿ, ರದ್ದುಪಡಿಸಿದ ಕಾರ್ಡ್‌ಗಳನ್ನು ಮರು ವಿತರಿಸಲು ಆಹಾರ ಇಲಾಖೆಗೆ ಸೂಚಿಸಲಾಗಿದೆ. ಈ ಕ್ರಮಗಳನ್ನು ದಿನದ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಆದೇಶವು ಕಡ್ಡಾಯಗೊಳಿಸಿದ್ದು, ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಬಗ್ಗೆ ಒತ್ತಿ ಹೇಳಿದೆ.

ಅರ್ಹರು ತಮ್ಮ ಕಾರ್ಡ್‌ಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಮತ್ತೆ ಮತ್ತೆ ಭರವಸೆ ನೀಡಿದ್ದಾರೆ. “ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದುಗೊಳಿಸಿದರೆ, ಅವುಗಳನ್ನು ತಕ್ಷಣವೇ ಮರುಸ್ಥಾಪಿಸಬೇಕು” ಎಂದು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...