Homeಕರ್ನಾಟಕಧಾರವಾಡ ಅಭ್ಯರ್ಥಿಯಾದರೂ ಕ್ಷೇತ್ರಕ್ಕೆ ಪ್ರವೇಶಿಸುವಂತಿಲ್ಲ; ಹೈಕೋರ್ಟ್ ಆದೇಶದಿಂದ ಕುಲಕರ್ಣಿ ಕಂಗಾಲು

ಧಾರವಾಡ ಅಭ್ಯರ್ಥಿಯಾದರೂ ಕ್ಷೇತ್ರಕ್ಕೆ ಪ್ರವೇಶಿಸುವಂತಿಲ್ಲ; ಹೈಕೋರ್ಟ್ ಆದೇಶದಿಂದ ಕುಲಕರ್ಣಿ ಕಂಗಾಲು

- Advertisement -
- Advertisement -

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಚುನಾವಣೆ ಎದುರಿಸಬೇಕಾಗಿದೆ.

ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕುಲಕರ್ಣಿಯವರ ಕೋರಿಕೆಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

‘ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿರುವ ಕಾರಣ ಪ್ರಚಾರದ ನಿಮಿತ್ತ 50 ದಿನಗಳ ಕಾಲ ಧಾರವಾಡದಲ್ಲೇ ನೆಲೆಸಲು ಅನುಮತಿ ನೀಡಬೇಕು’ ಎಂಬ ವಿ‌ನಯ ಕುಲಕರ್ಣಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ರಂದು ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು, ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಮನವಿಗೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

‘ಧಾರವಾಡ ಪ್ರವೇಶಿಸಲು ಇರುವ ನಿರ್ಬಂಧ ಸಡಿಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಸುಪ್ರೀಂಕೋರ್ಟ್ ಕಳೆದ ತಿಂಗಳ 29ರಂದು ತಿರಸ್ಕರಿಸಿದೆ. ಹೀಗಿರುವಾಗ, ಈ ಅರ್ಜಿಯನ್ನು ನ್ಯಾಯಪೀಠ ಮಾನ್ಯ ಮಾಡಬಾರದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಇದನ್ನೂ ಓದಿರಿ: 13 ಷರತ್ತು ವಿಧಿಸಿ ಕಾಂಗ್ರೆಸ್‌ಗೆ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ

ಬಿಜೆಪಿ ಮುಖಂಡ ಯೋಗೇಶ್ ಗೌಡ ಗೌಡರ್ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದವು. ಹೀಗಾಗಿ, ಅವರು ಸುಪ್ರಿಂ ಕೋರ್ಟ್‌ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ‘ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ’ ಎಂಬುದೂ ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.

ಈಗ ಚುನಾವಣಾ ಅಭ್ಯರ್ಥಿಯಾದರೂ ಕ್ಷೇತ್ರವನ್ನು ಪ್ರವೇಶಿಸದೆ ಚುನಾವಣೆಯನ್ನು ನಡೆಸಬೇಕಾದ ಸವಾಲು ವಿನಯ ಕುಲಕರ್ಣಿಯವರಿಗೆ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...