Homeಮುಖಪುಟಇಂಟರ್ನೆಟ್ ಸ್ಥಗಿತ ಮುಂದುವರಿಸುವಂತಿಲ್ಲ: ಮಣಿಪುರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಇಂಟರ್ನೆಟ್ ಸ್ಥಗಿತ ಮುಂದುವರಿಸುವಂತಿಲ್ಲ: ಮಣಿಪುರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

- Advertisement -
- Advertisement -

ಇಂಟರ್ನೆಟ್ ಸೇವೆಗಳು ಸಂವಿಧಾನದ ವಾಕ್ ಸ್ವಾತಂತ್ರ್ಯದ ಒಂದು ಭಾಗವಾಗಿದೆ ಎಂದು ಮಣಿಪುರ ಹೈಕೋರ್ಟ್ ಶುಕ್ರವಾರ ಹೇಳಿದ್ದು, ಇಡೀ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರ ಮುಂದುವರಿಸುವಂತಿಲ್ಲ ಎಂದು ಒತ್ತಿ ಹೇಳಿದೆ.

ಹಿಂಸಾಚಾರ ಬಾಧಿತವಲ್ಲದ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸದ ಸರ್ಕಾರವನ್ನು ಮುಖ್ಯ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ನ್ಯಾಯಮೂರ್ತಿ ಗೊಲ್ಮೆಯ್ ಗೈಫುಲ್ಶಿಲು ಕಬುಯಿ ಅವರ ವಿಭಾಗೀಯ ಪೀಠವು ತರಾಟೆಗೆ ತೆಗೆದುಕೊಂಡಿತು.

ರಾಷ್ಟ್ರೀಯ ಭದ್ರತೆಗೆ ಅಪಾಯವಿರುವ ಪ್ರದೇಶಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ನಮಗೆ ಅರ್ಥವಾಗಿದೆ. ಆದರೆ, ಇತರ ಪ್ರದೇಶಗಳಲ್ಲಿ ಯಾಕೆ ಇಂಟರ್‌ನೆಟ್‌ ಪುನರಾರಂಭಿಸಿಲ್ಲ ಎಂದು ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿದೆ. ಅಲ್ಲಿನ ಜನರ ಹಕ್ಕುಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಇಂಟರ್ನೆಟ್ ಸೇವೆಗಳು ವಾಕ್ ಸ್ವಾತಂತ್ರ್ಯದ ಒಂದು ಭಾಗವಾಗಿದೆ ಎಂಬುದನ್ನು ಯಾರೂ ಅಲ್ಲಗಳೆಯುವಂತಿಲ್ಲ ಎಂದು ನ್ಯಾಯಾಲಯ ಪುರುಚ್ಚರಿಸಿದೆ. ಇಂಟರ್‌ನೆಟ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಕ್ಕೆ ಚೀಮಾರಿ ಹಾಕಿದೆ.

ಇದನ್ನೂ ಓದಿ : ನೌಕಾಪಡೆ ವಿಮಾನ ನಿಲ್ದಾಣದಲ್ಲಿ ಇಳಿಯಲು ರಾಹುಲ್‌ಗೆ ಅನುಮತಿ ನಿರಾಕರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...