Homeಮುಖಪುಟಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರ ಆರಂಭವಾಗಿದ್ದು, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಯೋಜನೆಯಿಲ್ಲದ ಲಾಕ್‌ಡೌನ್ ಸಣ್ಣ ವ್ಯಾಪಾರಿಗಳು, ಕಾರ್ಮಿಕರು ಮತ್ತು ರೈತರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಪ್ರಧಾನಿ ಮೋದಿ ಈಗ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭಾಷಣಗಳಲ್ಲಿ ಹೇಳುತ್ತಿಲ್ಲ. ಅವರು ಸುಳ್ಳು ಹೇಳಿದ್ದಾರೆಂದು ಜನರಿಗೆ ತಿಳಿದಿದೆ. ಈಗ ಪ್ರಧಾನಿ ಇಲ್ಲಿಗೆ ಬಂದು ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಹೇಳಿದರೆ, ಜನರೇ ಅವರನ್ನು ಓಡಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

‘ಕಾಂಗ್ರೆಸ್ ಪಕ್ಷವು ಈವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ಒಂದು ವಿಷಯ ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿ‌ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರವು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಪರವಾಗಿದೆ. ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ಗಳ ಉದ್ದೇಶ ಎರಡು ಒಂದೇ ಆಗಿತ್ತು. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ನಾಶಪಡಿಸುವ ಗುರಿಯನ್ನು ಹೊಂದಿದ್ದವು’ ಎಂದು ಆರೋಪಿಸಿದ್ದಾರೆ.

“ಅವರಿಗೆ ಬಿಹಾರದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ. ಇದು ವಾಸ್ತವ. ರಾಜ್ಯದ ರೈತರು ಮತ್ತು ಯುವಕರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮಸ್ಯೆ ಇರುವುದು ನಿಮ್ಮ ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ಅವರೊಂದಿಗೆ. ಅವರುಗಳು ನಿಮಗೆ ಸತ್ಯವನ್ನು ಹೇಳುವುದಿಲ್ಲ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದರು” ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಲಕ್ಷಾಂತರ ಬಿಹಾರ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದನ್ನು ನೀವು ನೋಡಿದ್ದೀರಿ. ಇದು ಚುನಾವಣಾ ಸಮಯ, ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ ನೀವು ಅದನ್ನು ಮರೆಯಬಾರದು. ದಸರಾದಲ್ಲಿ ರೈತರು ಮತ್ತು ಕಾರ್ಮಿಕರು ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸಿ ಕೋಪ ಹೊರಹಾಕಿದ್ದಾರೆ. ದೇಶದ ರೈತರು ಮತ್ತು ಯುವಕರು ಪ್ರಧಾನಿಯವರ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ “ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ. ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.


ಇದನ್ನೂ ಓದಿ: ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...