Homeಮುಖಪುಟ'ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..'; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

‘ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..’; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

‘ಇವಿಎಂ-ವಿವಿಪ್ಯಾಟ್ ಪರಿಶೀಲನಾ ಅರ್ಜಿ’ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಕಾಯ್ದಿರಿಸಿದ್ದು, ‘ಮತ್ತೊಂದು ಸಾಂವಿಧಾನಿಕ ಪ್ರಾಧಿಕಾರದಿಂದ ನಡೆಸಬೇಕಾದ ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯವು ಹೇಳಿತು. 2024ರ ಲೋಕಸಭಾ ಚುನಾವಣೆಯ ಎರಡನೇ ಹಂತವು ಏಪ್ರಿಲ್ 26 ರಂದು ನಡೆಯಲಿರುವ ಕಾರಣ ಈ ತೀರ್ಪು ಬಂದಿದೆ.

ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯೊಂದಿಗೆ ಇವಿಎಂ ಬಳಸಿ ಚಲಾವಣೆಯಾದ ಮತಗಳ ಸಂಪೂರ್ಣ ಕ್ರಾಸ್ ವೆರಿಫಿಕೇಶನ್ ಕೋರಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಏಪ್ರಿಲ್ 18 ರಂದು ಕಾಯ್ದಿರಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ, ‘ಕೆಲವು ಸ್ಪಷ್ಟೀಕರಣದ ಅಗತ್ಯವಿದೆ’ ಎಂದು ಹೇಳಿತ್ತು. ಇವಿಎಂಗಳಲ್ಲಿ ತನ್ನ ‘ಪದೇಪದೆ ಕೇಳಲಾಗುವ ಪ್ರಶ್ನೆಗಳ’ಲ್ಲಿ (FAQs) ಚುನಾವಣಾ ಆಯೋಗವು ನೀಡಿದ ಉತ್ತರಗಳಲ್ಲಿ ಕೆಲವು ಗೊಂದಲಗಳಿವೆ’ ಎಂದು ಹೇಳಿತು.

ವಾದದ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶ ದತ್ತಾ ಅವರು ವಕೀಲ ಪ್ರಶಾಂತ್ ಭೂಷಣ್ ಅವರ ಕುರಿತು, “ಇಲ್ಲಿಯವರೆಗೆ ಅಂತಹ ಯಾವುದೇ ಘಟನೆಯ ವರದಿಯಾಗಿಲ್ಲ (ಚಿಹ್ನೆಯೊಂದಿಗೆ ದುರುದ್ದೇಶಪೂರಿತ ಕಾರ್ಯಕ್ರಮವನ್ನು ಲೋಡ್ ಮಾಡುವ); ಆದ್ದರಿಂದ, ನಾವು ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ, ನಾವು ಮತ್ತೊಂದು ಸಾಂವಿಧಾನಿಕ ಅಧಿಕಾರವನ್ನು ನಿಯಂತ್ರಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಇವಿಎಂ ಬಳಸಿ ಚಲಾವಣೆಯಾದ ಮತಗಳ ಸಂಪೂರ್ಣ ಕ್ರಾಸ್ ವೆರಿಫಿಕೇಶನ್ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯ ವೇಳೆ ಈ ಆದೇಶ ಹೊರಬಿದ್ದಿದೆ.

ಅರ್ಜಿದಾರರಲ್ಲಿ ಒಬ್ಬರಾದ ಸರ್ಕಾರೇತರ ಸಂಸ್ಥೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್), ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ಅಪಾರದರ್ಶಕ ಗಾಜಿನಿಂದ ಬದಲಾಯಿಸುವ ಚುನಾವಣಾ ಸಮಿತಿಯ 2017 ರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಕೋರಿದೆ.

ಪ್ರತಿ ಮತದಾನದ ನಂತರ ಮತದಾರರು ಇವಿಎಂ ಯಂತ್ರಗಳಿಂದ ತಯಾರಿಸಿದ ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೇಲಾವರಣವನ್ನು ಮತದಾರರಿಗೆ ಅನುಮತಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇಂದಿನ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಪೀಠವು, ಇವಿಎಂಗಳಲ್ಲಿ ಅಳವಡಿಸಲಾಗಿರುವ ಮೈಕ್ರೋಕಂಟ್ರೋಲರ್‌ನ ಕಾರ್ಯಗಳು, ಇವಿಎಂಗಳು ಮತ್ತು ವಿವಿಪ್ಯಾಟ್‌ಗಳನ್ನು ಭದ್ರಪಡಿಸುವುದು, ಯಂತ್ರಗಳನ್ನು ಉಳಿಸಿಕೊಳ್ಳುವ ಗರಿಷ್ಠ ಅವಧಿಯ ಬಗ್ಗೆ ಪ್ರಶ್ನೆಗಳನ್ನು ಕೇಳಿತ್ತು. ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯನ್ನು ಕೋರಿತ್ತು. ಏಪ್ರಿಲ್ 18 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದ ನಂತರ ಪೀಠದ ಹೇಳಿಕೆ ಬಂದಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...