Homeಕರ್ನಾಟಕರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕ? ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರೈತರ ಆತ್ಮಹತ್ಯೆಗಳ ವರದಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

”ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ‌” ಎಂದು ವಾಗ್ದಾಳಿ ನಡೆಸಿದ್ದಾರೆ.

”ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ʼಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿ ಲೀ. ನಂದಿನಿ ಹಾಲಿಗೆ 3 ರೂ ಹೆಚ್ಚಳ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆರೋಪಿ ಪ್ರಜ್ವಲ್ ರೇವಣ್ಣಗೆ ಸಿದ್ದರಾಮಯ್ಯ ಕ್ರಿಮಿನಲ್ ಹಣೆಪಟ್ಟಿ ಕಟ್ಟಿದ್ದಾರೆ: ಕುಮಾರಸ್ವಾಮಿ

0
'ಇನ್ನೂ ಆರೋಪಿಯಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕ್ರಿಮಿನಲ್ ಎಂಬ ಹಣೆಪಟ್ಟಿ ಕಟ್ಟಿದ್ದಾರೆ' ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಲೈಂಗಿಕ ಹಗರಣದ...