Homeಮುಖಪುಟಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಗಳಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸಿಬಿಐ ಮತ್ತು ಇಡಿಗೆ ತಿಳಿಸಿದೆ.

ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಸಿಸೋಡಿಯಾ ವಿರುದ್ಧದ ಆರೋಪಗಳ ವಾದ ಯಾವಾಗ ಪ್ರಾರಂಭವಾಗುತ್ತದೆ ಎಂದು ಕೇಳಿದೆ.

ನೀವು ಅವರನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇಡಲು ಸಾಧ್ಯವಿಲ್ಲ. ಒಂದು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರ, ಆರೋಪದ ಮೇಲಿನ ವಾದಗಳನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಪೀಠವು ರಾಜುಗೆ ಸೂಚಿಸಿದೆ.

ಸಿಸೋಡಿಯಾ ವಿರುದ್ಧದ ಪ್ರಕರಣಗಳು ಸಿಆರ್‌ಪಿಸಿಯ ಸೆಕ್ಷನ್ 207 (ದಾಖಲೆಗಳ ಪೂರೈಕೆ) ಹಂತದಲ್ಲಿವೆ ಮತ್ತು ಅದರ ನಂತರ ಆರೋಪದ ಮೇಲಿನ ವಾದಗಳು ಪ್ರಾರಂಭವಾಗುತ್ತವೆ ಎಂದು ರಾಜು ಪೀಠಕ್ಕೆ ತಿಳಿಸಿದ್ದಾರೆ.

ಆರೋಪದ ಮೇಲಿನ ವಾದಗಳು ಇನ್ನೂ ಏಕೆ ಪ್ರಾರಂಭವಾಗಿಲ್ಲ ಮತ್ತು ಅವು ಯಾವಾಗ ಪ್ರಾರಂಭವಾಗುತ್ತವೆ? ನಾಳೆ ನಮಗೆ ತಿಳಿಸಿ ಎಂದು ನ್ಯಾಯಮೂರ್ತಿ ಖನ್ನಾ ಅವರು ಹೇಳಿದ್ದಾರೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಗಳಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಅಬಕಾರಿ ಇಲಾಖೆ ಸೇರಿದಂತೆ 18 ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ದರ್ಜೆಯ ವ್ಯಕ್ತಿಯೊಬ್ಬರು ಲಂಚ ಸ್ವೀಕರಿಸಿದರೆ ಅದಕ್ಕೆ ತಕ್ಕ ಸಾಕ್ಷಿ ಪ್ರಸ್ತುತಪಡಿಸಬೇಕಾಗುತ್ತದೆ. ಮದ್ಯ ನೀತಿ ಬದಲಾವಣೆಯಿಂದಾಗಿ ಗ್ರಾಹಕರು ತಮ್ಮ ಹಣದಿಂದ ವಂಚಿತರಾಗಿದ್ದಾರೆ. ಹಣ ವರ್ಗಾವಣೆಯ ಪಿತೂರಿ ಕುರಿತು ವಾಟ್ಸಾಪ್ ಚಾಟ್‌ಗಳು ಮತ್ತು ಇತರ ಸಂವಹನ ದಾಖಲೆಗಳಿವೆ. ಅಕ್ರಮ ಹಣ ವರ್ಗಾವಣೆಯ ಅಪರಾಧದ ಬಗ್ಗೆ ಸಿಸೋಡಿಯಾ ವಿರುದ್ಧ ಸಾಕಷ್ಟು ದಾಖಲೆಗಳಿವೆ. ಅವರು ಮೊಬೈಲ್ ಫೋನ್‌ಗಳಲ್ಲಿನ ಸಾಕ್ಷ್ಯವನ್ನು ಕೂಡ ನಾಶಪಡಿಸಿದ್ದಾರೆ.  ಸಿಸೋಡಿಯಾಗೆ ಜಾಮೀನು ನೀಡಬಾರದು ಎಂದು ರಾಜು ಕೋರ್ಟ್‌ಗೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...