Homeಮುಖಪುಟ'ದೀದಿ ಇಲ್ಲದೆ ಬದುಕಲಾರೆ': ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

‘ದೀದಿ ಇಲ್ಲದೆ ಬದುಕಲಾರೆ’: ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

ಬಿಜೆಪಿಯವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ...

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಮಾಜಿ ಟಿಎಂಸಿ ಶಾಸಕಿ ಸೋನಾಲಿ ಗುಹಾ, ಶನಿವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು, ಪಕ್ಷ ತೊರೆದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಲ್ಲದೆ ಮತ್ತೆ ಟಿಎಂಸಿಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಆ ಸಂದರ್ಭದಲ್ಲಿ ನಾನು ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ಪಕ್ಷ ತ್ಯಜಿಸಿದ್ದೆ. ಆದರೆ ನನಗೆ ಈಗ ಅದು ತಪ್ಪು ಎಂದು ಅರಿವಾಗಿದೆ ಎಂದು ಅವರು ಪತ್ರಲ್ಲಿ ಉಲ್ಲೇಖಿಸಿದ್ದಾರೆ. ಆ ಪತ್ರವನ್ನು ಸೋನಾಲಿ ಗುಹಾ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

“ನಾನು ಇದನ್ನು ಭಾರವಾದ ಹೃದಯದಿಂದ ಬರೆಯುತ್ತಿದ್ದೇನೆ, ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ನಾನು ಬೇರೆ ಪಕ್ಷಕ್ಕೆ ಸೇರುವ ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದೆ. ಆದರೆ ಅಲ್ಲಿ ನನಗೆ ಒಗ್ಗಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

“ಮೀನೊಂದು ನೀರಿನಿಂದ ಹೊರಗುಳಿಯಲು ಸಾಧ್ಯವಿಲ್ಲ, ದೀದಿ, ನೀವು ಇಲ್ಲದೆ ಬದುಕಲು ನನಗೆ ಸಾಧ್ಯವಾಗುವುದಿಲ್ಲ. ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಮತ್ತು ನೀವು ನನ್ನನ್ನು ಕ್ಷಮಿಸದಿದ್ದರೆ, ನಾನು ಬದುಕಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನಾನು ಪಕ್ಷಕ್ಕೆ ಮತ್ತೆ ಸೇರಲು ಅನುಮತಿಸಿ. ನನ್ನ ಜೀವನದ ಉಳಿದ ಭಾಗವನ್ನು ನಿಮ್ಮ ವಾತ್ಸಲ್ಯದಲ್ಲಿ ಕಳೆಯಲು ಅವಕಾಶ ನೀಡಿ” ಎಂದು ಅವರು ಬಂಗಾಳಿ ಭಾಷೆಯಲ್ಲಿ ಬರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ಸೋನಾಲಿ ಗುಹಾ ಅವರು ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದರು. ಆದರೆ ಈ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಈ ಬಾರಿ ಅವರನ್ನು ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಯಿತು, ಅದರ ನಂತರ ಅವರು ಟಿವಿ ಚಾನೆಲ್‌ಗಳಲ್ಲಿ ಭಾವನಾತ್ಮಕ ಮಾತುಗಳನ್ನಾಡಿದ ನಂತರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಿಗೆ ಬಿಜೆಪಿಯ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಹೇಳಿದ್ದರು.

“ಬಿಜೆಪಿಗೆ ಸೇರ್ಪಡೆಗೊಳ್ಳುವ ನನ್ನ ನಿರ್ಧಾರ ತಪ್ಪಾಗಿದ್ದು, ಅದರ ಫಲವನ್ನು ನಾನಿಂದು ಅನುಭವಿಸುತ್ತಿದ್ದೇನೆ. ಬಿಜೆಪಿ ತ್ಯಜಿಸುತ್ತಿದ್ದೇನೆ ಎಂದು ಹೇಳಲು ನನಗೆ ಯಾವುದೇ ಅಂಜಿಕೆಯಿಲ್ಲ. ಏಕೆಂದರೆ ಅಲ್ಲಿ ನಾನು ಅನಗತ್ಯ ಎಂಬ ಭಾವನೆ ಇದೆ. ಅವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಮತ್ತು ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ಟಿಎಂಸಿಗೆ ಮತ್ತೆ ಸೇರ್ಪಡೆಗೊಳ್ಳಲು ಮುಖ್ಯಮಂತ್ರಿಯನ್ನು ಭೇಟಿಯಾಗಲು ಸಿದ್ಧರಿರುವುದಾಗಿ ಅವರು ಹೇಳಿದ್ದಾರೆ. ಮುಂದಿನ ವಾರ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಮಾತನಾಡುತ್ತೇನೆ ಎಂದು ಸೋನಾಲಿ ಗುಹಾ ಹೇಳಿದ್ದಾರೆ.


ಇದನ್ನೂ ಓದಿ: ತಮ್ಮ ಮೊದಲಿನ ಕ್ಷೇತ್ರ ಭವಾನಿಪೋರ್‌ನಿಂದ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...