Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಎಫ್‌ಐಆರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ದ್ವೇಷ ಭಾಷಣ: ಮೋದಿ ವಿರುದ್ಧ ಎಫ್‌ಐಆರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ‘ತಪ್ಪಾಗಿ ಗ್ರಹಿಸಲಾಗಿದೆ’ ಎಂದು ತಿರಸ್ಕರಿಸಿದೆ.

ನ್ಯಾಯಮೂರ್ತಿ ಸಚಿನ್ ದತ್ತಾ ಈ ಕುರಿತ ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚುನಾವಣಾ ಆಯೋಗವು ಈಗಾಗಲೇ ಈ ವಿಷಯವನ್ನು ಪರಿಗಣಿಸಿರುವುದರಿಂದ ಈ ಬಗ್ಗೆ ಅರ್ಜಿಯ ವಿಚಾರಣೆ ಮಾಡುವುದಿಲ್ಲ ಹೈಕೋರ್ಟ್‌ ಹೇಳಿದೆ. ಚುನಾವಣಾ ಆಯೋಗ ಯಾರಿಗೆ ನೋಟಿಸ್ ನೀಡಬೇಕೆಂದು ನಾವು ನಿರ್ಧರಿಸಲು ಸಾಧ್ಯವಿಲ್ಲ. ಅವರು ಏನನ್ನೂ ಮಾಡುವುದಿಲ್ಲ ಎಂದು ನಾವು ಊಹಿಸಲು ಸಾಧ್ಯವಿಲ್ಲ. ಆಯೋಗ ಮೊದಲು ಎಫ್‌ಐಆರ್ ದಾಖಲಿಸಿ ಬಳಿಕ ಪ್ರತಿಕ್ರಿಯೆ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಪೀಠ ಹೇಳಿದೆ.

ಇದೇ ವೇಳೆ ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಕಾರ್ಯವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ.

ಏಪ್ರಿಲ್ ಕೊನೆಯಲ್ಲಿ ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು. ಮೋದಿಯ ಈ ದ್ವೇಷದ ಭಾಷಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ನ್ಯಾಯವಾದಿ ನಿಜಾಮ್ ಪಾಷಾ ಅವರ ಪರ ವಾದ ಮಂಡಿಸಿದ ಅರ್ಜಿದಾರರು, ಭಾರತ ರಾಷ್ಟ್ರ ಸಮಿತಿ ನಾಯಕ ಕೆ.ಚಂದ್ರಶೇಖರ ರಾವ್ ವಿರುದ್ಧ ಚುನಾವಣಾ ಸಂಸ್ಥೆ ಕ್ರಮ ಕೈಗೊಂಡಿದೆ ಆದರೆ ಮೋದಿಗೆ ನೊಟೀಸ್‌ ಕೂಡ ಜಾರಿ ಮಾಡಿಲ್ಲ. ಮೋದಿಯನ್ನು ಇತರರಿಗಿಂತ ಭಿನ್ನವಾಗಿ ಏಕೆ ನಡೆಸಿಕೊಳ್ಳುತ್ತಿದ್ದಾರೆ? ಮೋದಿ ಭಾಷಣ ಮಾಡಿದ್ದರೂ ಚುನಾವಣಾ ಆಯೋಗ ನೊಟೀಸ್‌ ನೀಡಿರುವುದು ಬಿಜೆಪಿ ಅಧ್ಯಕ್ಷರಿಗೆ, ಅದರಲ್ಲಿ ಮೋದಿ ಮಾಡಿದ ಭಾಷಣವನ್ನು ಕೂಡ ಉಲ್ಲೇಖಿಸಿಲ್ಲ. ಈ ವ್ಯಕ್ತಿಗೆ ಮಾತ್ರ ಸಲಹೆ ಮತ್ತು ಇತರರ ವಿರುದ್ಧ ಕ್ರಮ ಯಾಕೆ? ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಕೋರ್ಟ್‌ನಲ್ಲಿ ವಾದಿಸಲಾಗಿದೆ.

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಸುರುಚಿ ಸೂರಿ, ನೋಟೀಸ್‌ಗೆ ಪ್ರತಿಕ್ರಿಯಿಸಲು ಬಿಜೆಪಿಗೆ ಮೇ 15ರವೆರೆಗೆ ಗಡುವು ನೀಡಲಾಗಿದೆ. ಅಗತ್ಯ ಬಿದ್ದರೆ ಈ ಬಗ್ಗೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...