Homeಮುಖಪುಟಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆ

ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಮೊದಲ ಬಾರಿಗೆ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಭಾನುವಾರ ಪ್ರಕಟಿಸಿದೆ.

ಹಿಂದಿ, ಇಂಗ್ಲಿಷ್ ಜೊತೆಗೆ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ದೇಶದಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ನಡೆಯು ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಸಿಎಪಿಎಫ್ ನೇಮಕಾತಿ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ನಿರ್ಧರಿಸಿದೆ. ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುವ ಅಮಿತ್ ಶಾ ಅವರ ಉಪಕ್ರಮದ ಭಾಗವಾಗಿ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಗೃಹ ಸಚಿವಾಲಯದ ಅಧಿಕೃತ ಪ್ರಕಟನೆ ತಿಳಿಸಿದೆ.

ಕಳೆದ ವರ್ಷ, ದಕ್ಷಿಣ ರಾಜ್ಯಗಳ ರಾಜಕೀಯ ನಾಯಕರು ನೇಮಕಾತಿ ಪರೀಕ್ಷೆಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಆಯ್ಕೆಗಳನ್ನು ಆಕ್ಷೇಪಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಸಿಎಪಿಎಫ್ ಪರೀಕ್ಷೆಯಿಂದ ತಮಿಳನ್ನು ಹೊರಗಿಟ್ಟಿರುವುದು ತಾರತಮ್ಯ ಮತ್ತು ಏಕಪಕ್ಷೀಯವಾಗಿದೆ ಎಂದು ಹೇಳಿದ್ದರು. ಅವರು ರಾಜ್ಯ ಭಾಷೆಗಳ ಆಯ್ಕೆಯನ್ನು ಸೇರಿಸಿ ಪರೀಕ್ಷೆಗೆ ಪರಿಷ್ಕೃತ ಅಧಿಸೂಚನೆಯನ್ನು ಸಹ ಕೋರಿದ್ದರು.

ಸಿಎಪಿಎಫ್ ನೇಮಕಾತಿ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಸಶಸ್ತ್ರ ಸೀಮಾ ಬಾಲ್ (ಎಸ್‌ಎಸ್‌ಬಿ) ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಗಳನ್ನು ಒಳಗೊಂಡಿದೆ.

ಇದನ್ನೂ ಓದಿ : ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...