Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...