Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ನೀಡಲಾಗುವುದು- ಅಮಿತ್ ಶಾ

ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ನೀಡಲಾಗುವುದು- ಅಮಿತ್ ಶಾ

- Advertisement -
- Advertisement -

ವಸಾಹತುಶಾಹಿ ಕಾಲದ ಭಾರತೀಯ ಕ್ರಿಮಿನಲ್ ಕಾನೂನುಗಳ ಕೂಲಂಕುಷ ತಿದ್ದುಪಡಿಗಾಗಿ ಸರಕಾರ ಮಸೂದೆಯನ್ನು ಮಂಡಿಸಿದೆ.

ಗುಂಪು ಹತ್ಯೆ  ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು  ಸಂಸತ್ತಿನಲ್ಲಿ ಅಮಿತ್ ಶಾ  ಹೇಳಿದ್ದಾರೆ.ಕ್ರಿಮಿನಲ್ ಕಾನೂನುಗಳಲ್ಲಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ಗುಂಪು ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯು ಕನಿಷ್ಠ ಏಳು ವರ್ಷಗಳಿಂದ ಮರಣದಂಡನೆಯವರೆಗೆ ಇರಲಿದೆ ಎಂದು ಹೇಳಿದ್ದಾರೆ.

ಕೊಲೆ  ಪ್ರಕರಣಗಳಲ್ಲಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಮತ್ತು ದಂಡ ವಿಧಿಸಲಾಗುತ್ತದೆ .ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಒಂದು ಗುಂಪು ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ವೈಯಕ್ತಿಕ ನಂಬಿಕೆ ಅಥವಾ ಯಾವುದೇ ಇತರ ಆಧಾರದ ಮೇಲೆ ಹತ್ಯೆಯನ್ನು ನಡೆಸಿದಾಗ ಅಂತಹ ಗುಂಪಿನ ಪ್ರತಿಯೊಬ್ಬ ಸದಸ್ಯನಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಇದರ ಜೊತೆಗೆ ದಂಡವನ್ನು ಕೂಡ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ವಸಾಹತುಶಾಹಿ ಯುಗದ ಭಾರತೀಯ ಕ್ರಿಮಿನಲ್ ಕಾನೂನುಗಳ  ಪರಿಶೀಲನೆ ಮಾಡಲಾಗವುದು.1860 ರ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್,  ಭಾರತೀಯ ಸಾಕ್ಷಿ ಕಾಯಿದೆ(ಎವಿಡೆನ್ಸ್ ಆಕ್ಟ್)  ಪರಿಶೀಲನೆ ಮಾಡುವುದಾಗಿ ಅಮಿತ್ ಶಾ ಹೇಳಿದ್ದಾರೆ.

ಪ್ರತ್ಯೇಕತೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಅಥವಾ ಸಾರ್ವಭೌಮತ್ವ ಅಥವಾ ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ  ಪರಾಧಕ್ಕೆ ಶಿಕ್ಷೆ ನೀಡುವ ಪರಿಷ್ಕೃತ ಕಾನೂನು ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

0
ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ. ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್...