Homeಮುಖಪುಟಮುಂದಿನ ವಾರ ಬಿಜೆಪಿಗೆ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಸೇರ್ಪಡೆ

ಮುಂದಿನ ವಾರ ಬಿಜೆಪಿಗೆ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಸೇರ್ಪಡೆ

- Advertisement -
- Advertisement -

ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅವರು ಮುಂದಿನ ವಾರ ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಅಮರಿಂದರ್‌ ಅವರು ಹೊಸದಾಗಿ ರಚಿಸಿರುವ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಅಮರಿಂದರ್‌‌ ಕಾಂಗ್ರೆಸ್ ತೊರೆದು, ಕಳೆದ ವರ್ಷ ಪಂಜಾಬ್ ಲೋಕ ಕಾಂಗ್ರೆಸ್ (PLC) ಸ್ಥಾಪಿಸಿದ್ದರು. ಜುಲೈ ತಿಂಗಳಲ್ಲೇ ಅವರು ಬಿಜೆಪಿ ಸೇರುವ ಸುದ್ದಿಗಳು ಬಂದಿದ್ದವು. ಬೆನ್ನು ಶಸ್ತ್ರಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದರು. ಬಿಜೆಪಿ ಸೇರ್ಪಡೆಗೆ ಎಲ್ಲ ಮಾತುಕತೆಗಳು ನಡೆದಿವೆ ಎನ್ನಲಾಗಿದ್ದು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಮರಿಂದರ್ ಸಿಂಗ್ ಅವರು ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಜೊತೆಗೆ ಐದು ದಶಕ ಕೆಲಸ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೂ ರಾಜೀನಾಮೆ ನೀಡಿದ್ದರು. ಇದಾದ ನಂತರ ಪಂಜಾಬ್ ಚುನಾವಣೆ ವೇಳೆಗೆ ‘ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ’ ಎಂಬ ಪಕ್ಷವನ್ನು ಕಟ್ಟಿ ಚುನಾವಣೆ ಎದುರಿಸಿದ್ದರು.

ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಅವರು ಕಾಂಗ್ರೆಸ್ ತೊರೆದ ನಂತರ ತಾನು ಬಿಜೆಪಿಗೆ ಸೇರುವುದನ್ನು ನಿರಾಕರಿಸಿದ್ದರು. ಆದರೆ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಪಟಿಯಾಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಠೇವಣಿಯನ್ನೂ ಕಳೆದುಕೊಂಡು ಹೀನಾಯವಾಗಿ ಸೋತಿದ್ದರು.

ಇದನ್ನೂ ಓದಿರಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಕಾಂಗ್ರೆಸ್ ತೊರೆಯುವ ವೇಳೆಗೆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ತಾನು ಪಕ್ಷದ  ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ, ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ಎಲ್ಲದರ ನಡುವೆ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಪಟಿಯಾಲದಿಂದ ಇನ್ನೂ ಕಾಂಗ್ರೆಸ್ ಸಂಸದರಾಗಿ ಉಳಿದಿದ್ದಾರೆ. ಮಾಜಿ ಕೇಂದ್ರ ಸಚಿವೆ ಆಗಿರುವ ಪ್ರಣೀತ್ ಕೌರ್ ಅವರು ತಮ್ಮ ಮಗಳು ಜೈ ಇಂದರ್ ಕೌರ್ ಅವರನ್ನು ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಬಿಜೆಪಿಯನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...