Homeಸಿನಿಮಾಕ್ರೀಡೆಟಿ20ಯಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಟಿ20ಯಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

- Advertisement -
- Advertisement -

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 68 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ನಾಯಕ ರೋಹಿತ್ ಶರ್ಮಾರವರ ಆಕರ್ಷಕ ಅರ್ಧಶತಕ ಮತ್ತು ದಿನೇಶ್ ಕಾರ್ತಿಕ್‌ರವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿತು.

129ನೇ ಅಂತರಾಷ್ಟ್ರೀಯ ಟಿ20 ಪಂದ್ಯ ಆಡಿದ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ದಾಖಲೆ ಮಾಡಿದರು. ಆ ಮೂಲಕ ನ್ಯೂಜಿಲೆಂಡ್ ಆಟಗಾರ ಮಾರ್ಟಿನ್ ಗುಪ್ಟಿಲ್‌ರವರ ದಾಖಲೆ ಮುರಿದಿದ್ದಾರೆ. ರೋಹಿತ್ 3,443 ರನ್ ಗಳಿಸಿದರೆ (27 ಅರ್ಧಶತಕ ಮತ್ತು ನಾಲ್ಕು ಶತಕಗಳು ಸೇರಿ) ಗುಪ್ಟಿಲ್ 116 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 3,399 ರನ್ ಗಳಿಸಿದ್ದಾರೆ. ಇದರಲ್ಲಿ 20 ಅರ್ಧಶತಕ ಮತ್ತು 03 ಶತಕಗಳು ಸೇರಿವೆ.

ರೋಹಿತ್ ಶರ್ಮಾರವರ ಬ್ಯಾಟಿಂಗ್ ಸರಾಸರಿ 32.48 ಇದ್ದರೆ ಗುಪ್ಟಿಲ್‌ರವರದು 32.37 ರಷ್ಟಿದೆ. ಭಾರತದ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 99 ಪಂದ್ಯಗಳಲ್ಲಿ 3.308 ರನ್ ಗಳಿಸಿದ್ದು, 50.12 ಸರಾಸರಿ ಹೊಂದಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ 44 ಎಸೆತಗಳಲ್ಲಿ 64 ರನ್ ಗಳಿಸಿದರೆ ದಿನೇಶ್ ಕಾರ್ತಿಕ್ ಕೇವಲ 19 ಎಸೆತಗಳಲ್ಲಿ 41 ರನ್ ಚಚ್ಚಿದರು. ಪರಿಣಾಮ ಭಾರತವು 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 190 ರನ್ ಪೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕಂಡು 122 ರನ್‌ ಗಳಿಸಲಷ್ಟೆ ಸಾಧ್ಯವಾಯಿತು.

5 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ಆಗಸ್ಟ್ 1 ರಂದು ನಡೆಯಲಿದೆ.

ಇದನ್ನೂ ಓದಿ: 5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...