Homeಕರ್ನಾಟಕಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ದುರ್ಮರಣ

ಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ದುರ್ಮರಣ

- Advertisement -
- Advertisement -

ಮಂಗಳವಾರ ಸಂಜೆ ನಡೆದ ಕಾರು ಅಪಘಾತದಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್‌ ಮತ್ತು ಅವರ ಜೊತೆಗಿದ್ದ ಇಬ್ಬರು ಮೃತಪಟ್ಟಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿದೆ. ಬೀಳಗಿ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 2012 ಬ್ಯಾಚಿನ ಅಧಿಕಾರಿಯಾಗಿದ್ದ ಬೀಳಗಿ ಅವರು, ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿ.) ಮತ್ತು ಕರ್ನಾಟಕ ರಾಜ್ಯ ಖನಿಜ ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

ವಿಜಯಪುರದಿಂದ ಕಾರಿನಲ್ಲಿ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡಲಾಗಿ ಬಂದ ನಾಯಿಯನ್ನು ಉಳಿಸಲು ಪ್ರಯತ್ನಿಸಿದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಬೀಳಗಿ ಸಹೋದರರಾದ ಶಂಕರ ಬೀಳಗಿ ಹಾಗೂ ಜೊತೆಗಿದ್ದ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...