Homeಅಂತರಾಷ್ಟ್ರೀಯಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ದಾಳಿ: 43ಕ್ಕೂ ಹೆಚ್ಚು ಮಂದಿಗೆ ಗಾಯ

ಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ದಾಳಿ: 43ಕ್ಕೂ ಹೆಚ್ಚು ಮಂದಿಗೆ ಗಾಯ

ದಾಳಿಯ ಹಿಂದೆ ಯಾವ ಸಂಘಟನೆಯ ಕೈವಾಡವಿದೆ ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

- Advertisement -
- Advertisement -

ಉತ್ತರ ಆಫ್ಘಾನಿಸ್ತಾನದ ಸಮಾನ್ ಗನ್ ವಲಯದಲ್ಲಿರುವ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯ ಕಚೇರಿ ಮೇಲೆ ಕಾರ್ ಬಾಂಬ್ ದಾಳಿ ಹಾಗೂ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಯ ಸಿಬ್ಬಂದಿ, ಮಕ್ಕಳು ಸೇರಿದಂತೆ 43 ಕ್ಕೂ ಹೆಚ್ಚು ಮಂದಿ ನಾಗರಿಕರು ತೀವ್ರ ಗಾಯಗೊಂಡಿದ್ದಾರೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಗಾಯಾಳುಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ದಾಳಿಯ ಹಿಂದೆ ಯಾವ ಸಂಘಟನೆಯ ಕೈವಾಡವಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ ಈ ವಲಯದಲ್ಲಿ ತಾಲಿಬಾನ್ ಸಂಘಟನೆ ಹೆಚ್ಚು ಕ್ರಿಯಾಶೀಲವಾಗಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ದಾಳಿಯ ಹಿಂದೆ ಯಾರಿದ್ದಾರೆ ಎಂಬ ಮಾಹಿತಿ ತಿಳಿದುಬಂದಿಲ್ಲ ಆದರೆ ಕಾರ್ ಬಾಂಬ್ ದಾಳಿ ಮತ್ತು ಗುಂಡಿನ ಚಕಂಕಿಯಲ್ಲಿ ಭದ್ರತಾ ಪಡೆಯ ಯೋಧರು ಕೂಡ ಗಾಯಗೊಂಡಿದ್ದಾರೆ ಎಂದು ಆಲ್ ಝಜೀರಾ ತಿಳಿಸಿದೆ.
ಖತಾರ್‌ ರಾಜಧಾನಿ ದೋಹಾದಲ್ಲಿ ಅಮೆರಿಕಾ-ತಾಲಿಬಾನ್ ಒಡಂಬಡಿಯಂತೆ ಇಂಟ್ರಾ-ಆಫ್ಘಾನ್ ಮಾತುಕತೆ ನಡೆಯಬೇಕಿತ್ತು. ಆದರೆ ತಾಲಿಬಾನ್ ಜತೆ ಆಫ್ಘಾನ್ ಸರ್ಕಾರ ಮಾತುಕತೆ ನಡೆಸಲು ವಿಳಂಬ  ಮಾಡಿದೆ. ಹಾಗಾಗಿ ಹೋರಾಟ ನಡೆಸುವುದು ಅನಿವಾರ್ಯ ಆಯ್ಕೆಯಾಗಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹುದ್ದೀಣ್ ಹೇಳಿಕೆಯನ್ನು ಉಲ್ಲೇಖಿಸಿ ಅಲ್ ಝಜೀರಾ ವರದಿ ಮಾಡಿದೆ.


ಓದಿ: ಅಫ್ಘಾನದ ಚಿತ್ರವನ್ನು ರಾಜಸ್ಥಾನದ ಬಾಂಬ್‌ ಸ್ಫೋಟವೆಂದು ವೈರಲ್;ಫ್ಯಾಕ್ಟ್‌ಚೆಕ್


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...