Homeಕರ್ನಾಟಕಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕ ಬಾಪೂಜಿನಗರದ ನಿವಾಸಿ ಬಾಬು ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಮೃತ ಕಾರು ಚಾಲಕ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಸಂಸದ ಡಾ. ಕೆ.ಸುಧಾಕರ್, ಅವರ ಆಪ್ತ ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಹಾಗೂ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ಮೋಹನ್ ಕಾರಣವೆಂದು ಉಲ್ಲೇಖಿಸಿದ್ದಾರೆ. ಅದನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

“ಮೂವರು ನನಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ” ಎಂದು ಮೃತ ಬಾಬು ಆರೋಪಿಸಿದ್ದಾರೆ.

ಬಾಬು ಅವರ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಾಬು ಅವರು ಬರೆದಿರುವ ಡೆತ್‌ನೋಟ್‌ನಲ್ಲಿ ಸಂಸದರ ಹೆಸರು ಉಲ್ಲೇಖಿಸಿದ್ದಾರೆ. ಆ ಡೆತ್‌ನೋಟ್‌ ಆಧರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಬಾಬು ದಲಿತ ಸಮುದಾಯಕ್ಕೆ ಸೇರಿದವರು. ಪದೇ ಪದೇ ಹಣ ಕೇಳಿದಾಗ ಒತ್ತಡಕ್ಕೆ ಒಳಗಾಗಿ ಅವರು ಸಾವಿಗೆ ಶರಣಾಗಿದ್ದಾರೆ” ಎಂದು ಸುಧಾಕರ್ ಹೇಳಿದ್ದರು. ಸಂಸದ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ್ದರು.

ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಇದೇ ಸಾವು ಬೇರೆ ಕಡೆ ಆಗಿದ್ದರೆ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲೇ ಉಲ್ಲೇಖಿಸಿ ಅಬ್ಬರಿಸುತ್ತಿದ್ದರು. ಆದರೆ, ಈಗ ಮೌನವಾಗಿದ್ದಾರೆ. ಬಾಬು ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತದೆ. ಬಿಜೆಪಿಗರು ಯಾಕೆ ಮೌನವಾಗಿದ್ದಾರೆ. ಈ ಹಿಂದೆ ಮಾತನಾಡಿದಂತೆ, ಈಗಲೂ ಮಾತಾಡುವ ದಮ್ಮು ತಾಕತ್ತು ಅಶೋಕ್‌ ಮತ್ತು ಛಲವಾದಿ ನಾರಾಯಣ ಸ್ವಾಮಿಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.

ಆದಾಗ್ಯೂ, ಪ್ರಕರಣ ಸಂಬಂಧ ಸುಧಾಕರ್ ಅವರನ್ನು ಆರ್. ಅಶೋಕ್‌ ಸಮರ್ಥಿಸಿಕೊಂಡಿದ್ದಾರೆ. ‘ಕಾಂಗ್ರೆಸ್ಸಿಗರು ವಿಪಕ್ಷದವರನ್ನು ಟಾರ್ಗೆಟ್ ಮಾಡಿದ್ದಾರೆ. ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸುಧಾಕರ್‌ ಪಾತ್ರ ಇಲ್ಲದಿದ್ದರೂ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿಯ ಇತರ ನಾಯಕರು ಈ ವಿಷಯದಿಂದ ಅಂತರ ಕಾಯ್ದುಕೊಂಡಂತಿದೆ. ಅಶೋಕ್ ಹೊರತು ಯಾವುದೇ ನಾಯಕರು ಸುಧಾಕರ್ ಪರ ಅಥವಾ ವಿರೋಧ ಹೇಳಿಕೆ ನೀಡಿಲ್ಲ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...