Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...