HomeUncategorizedಟಿಎಂ ಕೃಷ್ಣಗೆ 'ಸಂಗೀತ ಕಲಾನಿಧಿ' ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

- Advertisement -
- Advertisement -

ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅತ್ಯುನ್ನತ ಗೌರವವಾದ ‘ಸಂಗೀತ ಕಲಾನಿಧಿ’ ಬಿರುದನ್ನು ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ನೀಡುವ ನಿರ್ಧಾರಕ್ಕೆ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಇರುವ ಜಾತೀಯತೆ, ತಾರತಮ್ಯ ವಿರೋಧಿಸಿಕೊಂಡು ಬಂದಿರುವುದೇ ಟಿಎಂ ಕೃಷ್ಣ ಅವರಿಗೆ ಈ ಗೌರವ ಸಿಗುವುದಕ್ಕೆ ಗಾಯಕರು ಆಕ್ಷೇಪಣೆ ಸಲ್ಲಿಸಲು ಕಾರಣವಾ ಎಂಬ ಪ್ರಶ್ನೆ ಮೂಡಿದ್ದು, ಬ್ರಾಹ್ಮಣ್ಯದ ಮನಸ್ಥಿತಿಯಿಂದ ಮಾಡಿದ ವಿರೋಧ ಇದಾಗಿದೆ ಎಂದು ಹಲವರು ಟೀಕಿಸಿದ್ದಾರೆ, ಇದರ ಜೊತೆಗೆ ಇವರ ಬಹಿಷ್ಕಾರದ ಕರೆಗಳನ್ನು ಬೆಂಬಲಿಸಲು ಹಲವು ಸಂಗೀತಗಾರರು ನಿರಾಕರಿಸಿದ್ದಾರೆ.

ಮದ್ರಾಸ್ ಸಂಗೀತ ಅಕಾಡೆಮಿಯು 2024ರ ವಾರ್ಷಿಕ ಸಂಗೀತ ಅಕಾಡೆಮಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದಾಗಿ ಮದ್ರಾಸ್ ಸಂಗೀತ ಅಕಾಡೆಮಿಯು ಘೋಷಿಸಿದೆ.ಕರ್ನಾಟಕ ಸಂಗೀತ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ಸಂಗೀತ ಅಕಾಡೆಮಿ ಸಮ್ಮೇಳನ 2024ರಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದ್ದಾರೆ.  ಅವರು ಕರ್ನಾಟಕ ಸಂಗೀತ ಲೋಕಕ್ಕೆ ಅಪಾರ ಹಾನಿಯನ್ನುಂಟು ಮಾಡಿದ್ದಾರೆ, ಉದ್ದೇಶಪೂರ್ವಕವಾಗಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ತ್ಯಾಗರಾಜ ಮತ್ತು ಎಂಎಸ್ ಸುಬ್ಬುಲಕ್ಷ್ಮಿ ಅವರನ್ನು ಅವಮಾನಿಸಿದ್ದಾರೆ. ಪೆರಿಯಾರ್‌ ಅವರನ್ನು ವೈಭವೀಕರಿಸಿದ್ದಾರೆ ಎಂದು ರಂಜನಿ ಮತ್ತು ಗಾಯತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದಿಕ ವಾಗ್ಮಿಯಾಗಿ ಗುರುತಿಸಿಕೊಂಡಿರುವ ದುಶ್ಯಂತ್ ಶ್ರೀಧರ್, ಸಂಗೀತ ಅಕಾಡೆಮಿ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 1ರಂದು ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಹರಿಕಥಾ ನಿರೂಪಕಿ ವಿಶಾಖ ಹರಿ ಅವರು ಇನ್ಸ್ಟಾಗ್ರಾಂನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ನಿಯೋಜತರು ಈ ಹಿಂದೆ ಸಾಕಷ್ಟು ದೂಷಣೆಯಲ್ಲಿ ತೊಡಗಿದ್ದಾರೆ, ಹಲವರ ಭಾವನೆಗಳನ್ನು  ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವೇಳೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಟಿಎಂ ಕೃಷ್ಣ ಅವರನ್ನು ಬೆಂಬಲಿಸಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ. ಅವರು ರಂಜನಿ ಮತ್ತು ಗಾಯತ್ರಿಗೆ ಪ್ರಮುಖ ಪ್ರಶ್ನೆಯನ್ನು ಕೇಳಿದ್ದಾರೆ. 2018ರಲ್ಲಿ ಕರ್ನಾಟಕ ಸಂಗೀತದ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಮಾತನಾಡುವಾಗ ಅಂತಹ ಭಾವೋದ್ರೇಕದ ಪತ್ರವನ್ನು ನಾವು ಕಂಡಿರಲಿಲ್ಲ ಎಂದು ಹೇಳಿದ್ದು, ಪತ್ರದ ಹಿಂದೆ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ರಂಜನಿ ಗಾಯತ್ರಿ ಅವರ ಕಾರ್ಯಕ್ರಮದ ಬಹಿಷ್ಕಾರದ ಬಗ್ಗೆ ಪ್ರತಿಕ್ರಿಯಿಸಿದ ಮದ್ರಾಸ್‌ ಮ್ಯೂಸಿಕ್‌ ಅಕಾಡೆಮಿ ಅಧ್ಯಕ್ಷರಾದ ಎನ್‌ ಮುರಳಿ, ಇದು ಕೀಳು ಅಭಿರುಚಿಯಿಂದ ಬರೆದ ಪತ್ರವಾಗಿದೆ. ನೀವು ನನ್ನ ಮತ್ತು ಅಕಾಡೆಮಿಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪತ್ರವನ್ನು ನಾನು ಗಮನಿಸಿದ್ದೇನೆ. ನಿಮ್ಮ ಪತ್ರ  ವಿವೇಚನಾರಹಿತವಾಗಿರುವುದಲ್ಲದೆ, ಪತ್ರದ ಹಿಂದಿನ ಉದ್ದೇಶದ ಬಗ್ಗೆ ನನಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಬಿರುದು ಘೋಷಣೆ ಬೆನ್ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೃಷ್ಣ,  ಮ್ಯೂಸಿಕ್ ಅಕಾಡೆಮಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇದನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ. ಮದ್ರಾಸ್‌ನ ಮ್ಯೂಸಿಕ್ ಅಕಾಡೆಮಿ 2024ಕ್ಕೆ ನನಗೆ ಸಂಗೀತ ಕಲಾನಿಧಿ ಎಂಬ ಬಿರುದನ್ನು ನೀಡಿ ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ಕರ್ನಾಟಕ ಸಂಗೀತಗಾರರಿಗೆ ನೀಡುವ ಅತ್ಯುನ್ನತ ಗೌರವ ಎಂಬುದರಲ್ಲಿ ಸಂದೇಹವಿಲ್ಲ. ಈ ಕ್ಷಣದಲ್ಲಿ ನಾನು ನನ್ನ ಕುಟುಂಬ, ನನ್ನ ಗುರುಗಳು ಮತ್ತು ಸಹ-ಸಂಗೀತಗಾರರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಗೀತಗಾರರಲ್ಲದೆ  ಕೃಷ್ಣ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಮತ್ತು ಪ್ರತಿಷ್ಠಿತ ಎ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೃಷ್ಣ ಅವರು ಅಸ್ತಿತ್ವದಲ್ಲಿರುವ ಕರ್ನಾಟಕ ಸಂಗೀತ ವ್ಯವಸ್ಥೆಯಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ದ ಆಗಾಗ್ಗ ಧ್ವನಿಗೂಡಿಸುತ್ತಿದ್ದರು. ಇದು ಬಲಪಂಥೀಯ ಗಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಕೃಷ್ಣ ಅವರಿಗೆ ಬಿರುದು ಸಿಕ್ಕಿರುವ ಕಾರ್ಯಕ್ರಮವನ್ನು ಬಲಪಂಥೀಯರು ವಿರೋಧಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಹಿಂದುತ್ವಾವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ರಂಜನಿ-ಗಾಯತ್ರಿ ಮತ್ತು ವಿಶಾಖ ಹರಿ ಅವರು 2024ರ ಸಂಗೀತ ಅಕಾಡೆಮಿ ಆಯೋಜಿಸಿದ್ದ ಸಂಗೀತ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ, ಏಕೆಂದರೆ ಟಿ.ಎಂ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು, ಸನಾತನ ಧರ್ಮದ ಜೊತೆ ನಿಂತಿದ್ದಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಂಜನಿ ಗಾಯತ್ರಿ ಅವರು ತಮ್ಮ ಪೋಸ್ಟ್‌ನಲ್ಲಿ ಪೆರಿಯಾರ್‌ ಅವರನ್ನು ಎಳೆದು ತಂದಿದ್ದರು ಈ ಬಗ್ಗೆ  ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ, ರಾಮ್‌ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಅವರು ಅಸೂಯೆ ಪಡುತ್ತಾರೆ ಮತ್ತು ಕೋಪದಿಂದ ಕುಪ್ಪಳಿಸುತ್ತಿದ್ದಾರೆ. ಪೆರಿಯಾರ್ ಮೇಲೆ ಆಕ್ರಮಣ ಮಾಡುವ ಹಳೆಯ, ಜಾತಿವಾದಿ ಮತ್ತು ದ್ವೇಷದ ತಂತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡಿನ 0.1% ಕ್ಕಿಂತ ಹೆಚ್ಚು ಜನರಿಗೆ ತಿಳಿದಿಲ್ಲದ ಅಥವಾ ಕಾಳಜಿ ವಹಿಸದ ಪ್ರಶಸ್ತಿಗಾಗಿ ಪೆರಿಯಾರ್ ಅವರನ್ನು ನಿರ್ದಿಷ್ಟವಾಗಿ ತಮ್ಮ ಆಂತರಿಕ ಕದನಕ್ಕೆ ಎಳೆಯುವ ಅವರ ಆಯ್ಕೆಯು ರಾಜಕೀಯವಾಗಿದೆ. ಪೆರಿಯಾರ್ ಅವರನ್ನು ಪ್ರಚೋದಿಸುವ ಮೂಲಕ, ಅವರು ಪೆರಿಯಾರನ್ನು ದ್ವೇಷಿಸಲು ಯತ್ನಿಸುತ್ತಾರೆ. ಗಾಯಕ-ದ್ವಯರ ಈ ಹಾವಿಗಿಂತ ಕೆಟ್ಟ ನಡವಳಿಕೆಯು ಮಹಾನ್ ಪೆರಿಯಾರ್ ಅವರ ಸ್ಥಾನಕ್ಕೆ ಕುತ್ತು ತರುವುದಿಲ್ಲ. ಆದರೆ ಇದು ಚುನಾವಣೆಗೆ ಮುಂಚಿತವಾಗಿ ಬ್ರಾಹ್ಮಣರಲ್ಲಿ ಹೆಚ್ಚು ಜಾತೀಯತೆ ಮತ್ತು ದ್ವೇಷವನ್ನು ಉಂಟುಮಾಡುತ್ತದೆ. ದೇಶವನ್ನು ಸುಧಾರಿಸಲು ಪ್ರಯತ್ನಿಸಿದವರ ವಿರುದ್ಧ ದ್ವೇಷವನ್ನು ಬ್ರಾಹ್ಮಣರು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...