Homeಮುಖಪುಟಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

- Advertisement -
- Advertisement -

ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ ಗ್ರಾಮದ 45 ವರ್ಷದ ಮಹಿಳೆಯ ಸಾವಿನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಏಪ್ರಿಲ್ 22ರಂದು ಪ್ರಕರಣ ದಾಖಲಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಡಿಎಂಕೆಗೆ ಮತ ಹಾಕದ ಕಾರಣ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಅಣ್ಣಾಮಲೈ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಹೇಳಿದರೆ, ಕೌಟುಂಬಿಕ ಕಲಹದಿಂದ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದ ಲೋಕಸಭೆ ಚುನಾವಣೆಯ ವೇಳೆ ಶ್ರೀಮುಷ್ಣಂ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಕಿರಿಮಣಿಯಂ ಗ್ರಾಮದಲ್ಲಿ ಇಂಡಿಯಾ ಮೈತ್ರಿ ಕೂಟದ ಡಿಎಂಕೆ ಅಭ್ಯರ್ಥಿಗೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಡಿಎಂಕೆ ಕಾರ್ಯಕರ್ತರ ಗುಂಪೊಂದು ಮಹಿಳೆಯನ್ನು ಕೊಲೆ ಮಾಡಿ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದೆ ಎಂದು ಅಣ್ಣಾಮಲೈ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಏಪ್ರಿಲ್ 21ರಂದು ಹೇಳಲಾಗಿತ್ತು.

ಜಿಲ್ಲಾ ಪೊಲೀಸರ ಪ್ರಕಾರ, ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮೊದಲಿನಿಂದಲೂ ದ್ವೇಷವಿತ್ತು, ಇದರ ಭಾಗವಾಗಿ ಏಪ್ರಿಲ್ 19ರಂದು ಜಗಳ ನಡೆದಿದೆ. ಜಗಳದ ಸಮಯದಲ್ಲಿ ಕಲೈಮಣಿ ಮತ್ತು ಅವರ ಸಂಬಂಧಿಕರು ಜಯಶಂಕರ್ ಮತ್ತು ಅವರ ಅತ್ತಿಗೆ ಜೆ.ಗೋಮತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗೋಮತಿ ಅವರಿಗೆ ಆಂತರಿಕವಾಗಿ ಗಾಯಗಳಾಗಿದೆ. ಅಂಡಿಮಡಂನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವರನ್ನು ತಕ್ಷಣ ದಾಖಲಿಸಿದರೂ ಈ ವೇಳೆ ಅವರು ಮೃತಪಟ್ಟಿದ್ದರು.

ಕಡಲೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ 10 ಜನರ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ, ಕಲೈಮಣಿ ಮತ್ತು ಅವರ ಪತ್ನಿ ಕೆ ದೀಪಾ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.

ಸುಳ್ಳು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಅಣ್ಣಾಮಲೈ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು 505 (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ ಮಹಿಳೆಯ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದ್ದಕ್ಕಾಗಿ ಇತರ ಮೂವರ ವಿರುದ್ಧವೂ ಈ ಹಿಂದೆ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...