Homeಮುಖಪುಟಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಕೇಂದ್ರ ಸಚಿವ ನಾರಾಯಣ ರಾಣೆ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ 'ಶುದ್ಧಿ' ಮಾಡಿದ್ದಾರೆ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಆಡಳಿತದಲ್ಲಿರುವ ಶಿವಸೇನೆ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಹಿಂದೊಮ್ಮೆ ಮಿತ್ರಪಕ್ಷಗಳಾಗಿದ್ದು ಇವು ಈಗ ದಿನನಿತ್ಯ ಕಚ್ಚಾಟದಲ್ಲಿ ತೊಡಗಿವೆ. ಬಿಜೆಪಿ ಮುಖಂಡ, ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ‘ಶುದ್ಧಿ’ ಮಾಡುವ ಮೂಲಕ ಅವಮಾನಿಸಿದ್ದಾರೆ. ಇದಕ್ಕೆ ಬಿಜೆಪಿ ಕೆಂಡಕಾರಿದ್ದು ವಿವಾದ ಭುಗಿಲೆದ್ದಿದೆ.

ಬಿಜೆಪಿಯು ಜನಾರ್ಶೀವಾದ ಯಾತ್ರೆ ಮಾಡುತ್ತಿರುವುದು ಸರಿಯಷ್ಟೇ. ಆದರೆ ಮಹಾರಾಷ್ಟ್ರದಲ್ಲಿ ಅದರ ಉದ್ಘಾಟನೆಯ ಸಂದರ್ಭದಲ್ಲಿ ಭಾರೀ ಜನ ಸೇರಿದ್ದರು. ಆಗ ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಸ್ಕರಿಸಿ ಅಲ್ಲಿಂದಲೇ ಯಾತ್ರೆ ಆರಂಭಿಸಿದ್ದರು. ಈ ಕುರಿತು ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ. ಅದೇ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತರು ಪ್ರತಿಮೆಯ ಸುತ್ತ ಗೋಮೂತ್ರ ಸಿಂಪಡಿಸಿ ಶುದ್ದಿ ಮಾಡಿದ್ದಾರೆ.

ಈ ಕ್ರಮಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ನಾರಾಯಣ ರಾಣೆ “ನಾವು ರಾಜಕೀಯ ರ್ಯಾಲಿ ಮಾಡುತ್ತಿಲ್ಲ. ಜನರ ಕಷ್ಟಗಳನ್ನು ಅರಿತುಕೊಳ್ಳಲು ಹೋಗುತ್ತಿದ್ದೇವೆ.  ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ಶಿವಸೇನೆ ಮರೆಯಬಾರದು. ಇಲ್ಲಿನ ಮೈತ್ರಿ ಸರ್ಕಾರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಹಲವು ದಾಖಲೆಗಳು ನಮ್ಮಲ್ಲಿವೆ. ಅವರು ಕೇವಲ ರಾಜ್ಯದಲ್ಲಿದ್ದಾರೆ ಅಷ್ಟೇ. ನಾವು ಅವರ ಮೇಲಿದ್ದೇವೆ” ಎಂದು ಬಹಿರಂಗ ಬೆದರಿಕೆ ಹಾಕಿದ್ದಾರೆ.

ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಶುದ್ಧೀಕರಣ”ದಲ್ಲಿ ತೊಡಗಿಸಿಕೊಂಡವರಿಗೆ ಮೂಲ ಶಿವಸೇನೆ ಅರ್ಥವಾಗುವುದಿಲ್ಲ. ಬಾಳಾಸಾಹೇಬ್ ಠಾಕ್ರೆ ಅವರನ್ನು ಬಂಧಿಸಲು ಪ್ರಯತ್ನಿಸಿದ ಜನರೊಂದಿಗೆ ಶಿವಸೇನೆ ಅಧಿಕಾರ ಹಂಚಿಕೊಳ್ಳುತ್ತಿರುವುದು ಮತ್ತು ಅವರಿಗೆ ಗೌರವ ಸಲ್ಲಿಸುತ್ತಿರುವ ಜನರ ಮೇಲೆ ದಾಳಿ ಮಾಡುವುದು ವಿಚಿತ್ರವಾಗಿದೆ. ಶುದ್ಧೀಕರಣವು ಸಂಕುಚಿತ ಮನೋಭಾವದ ಸೂಚನೆಯಾಗಿದೆ. ಇದು ಮಹಾರಾಷ್ಟ್ರದ ಸಂಸ್ಕೃತಿಯಲ್ಲ” ಎಂದಿದ್ದಾರೆ.

ಈ ಹಿಂದೆ ನಾರಾಯಣ ರಾಣೆಯವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಾಳಾಸಾಹೇಬ್ ಠಾಕ್ರೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಹಾಗಾಗಿ ಶಿವಸೈನಿಕರು ಅವರ ಮೇಲೆ ಕಿಡಿಕಾರುತ್ತಿದ್ದಾರೆ. ಇನ್ನು 1992-93ರ ಗಲಭೆಯ ಆರೋಪದ ಮೇಲೆ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಸರ್ಕಾರವು ಬಾಳಾಸಾಹೇಬ್ ಠಾಕ್ರೆ ಬಂಧಿಸಲು ಮುಂದಾಗಿತ್ತು. ಹಾಗಾಗಿ ಸದ್ಯದ ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವನ್ನು ಬಿಜೆಪಿ ವಿರೋಧಿಸುತ್ತಿದೆ.

ಕಳೆದ ತಿಂಗಳ ಜುಲೈ 5 ರಂದು ದೇವೇಂದ್ರ ಫಡ್ನವಿಸ್ ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ‘ ಎಂಬ ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಶಿವಸೇನೆಯ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ‘ಬಿಜೆಪಿ-ಶಿವಸೇನೆ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್‌ ಥರ‘ ಎಂಬ ಹೇಳಿಕೆ ನೀಡಿದ್ದರು. ಒಂದು ತಿಂಗಳಲ್ಲಿಯೇ ಮತ್ತೆ ಅವರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.


ಇದನ್ನೂ ಓದಿ: ಬಿಜೆಪಿ ಶಿವಸೇನೆ ಮತ್ತು ಎನ್‌ಸಿಪಿಗೆ ಧನ್ಯವಾದ ಹೇಳಬೇಕು- ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...