Homeಮುಖಪುಟಕೇರಳ: ಕೆಪಿಸಿಸಿ ಅಧ್ಯಕ್ಷ ಸುಧಾಕರನ್, ವಿಪಕ್ಷ ನಾಯಕ ಸತೀಶನ್ ಸೇರಿ ಹಲವು ಕಾಂಗ್ರೆಸ್‌ ನಾಯಕರ ಮೇಲೆ...

ಕೇರಳ: ಕೆಪಿಸಿಸಿ ಅಧ್ಯಕ್ಷ ಸುಧಾಕರನ್, ವಿಪಕ್ಷ ನಾಯಕ ಸತೀಶನ್ ಸೇರಿ ಹಲವು ಕಾಂಗ್ರೆಸ್‌ ನಾಯಕರ ಮೇಲೆ FIR ದಾಖಲು

- Advertisement -
- Advertisement -

ಕೇರಳದ ಡಿಜಿಪಿ ಕಚೇರಿಗೆ ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮತ್ತು ರಾಜ್ಯ ಕಾಂಗ್ರೆಸ್‌ ಘಟಕದ ಹಿರಿಯ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗಲಭೆ, ರಸ್ತೆ ತಡೆ, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಐಪಿಸಿಯ ವಿವಿಧ ನಿಬಂಧನೆಗಳಡಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಪಕ್ಷದ ಎಲ್ಲಾ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಸಂಸದರಾದ ಶಶಿ ತರೂರ್, ಕೋಡಿಕುನ್ನಿಲ್ ಸುರೇಶ್, ಅಡೂರ್ ಪ್ರಕಾಶ್, ಕೆ ಮುರಳೀಧರನ್ ಮತ್ತು ಜೆಬಿ ಮಾಥರ್, ಶಾಸಕ ರಮೇಶ್ ಚೆನ್ನಿತ್ತಲ ಮತ್ತು ಇತರರ ವಿರುದ್ಧ ಮ್ಯೂಸಿಯಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ ಮುಂಜಾನೆ ಹಿಂಸಾಚಾರ ನಡೆದಿತ್ತು. ಪೊಲೀಸರು ಸಿಡಿಸಿದ ಅಶ್ರುವಾಯು ಶೆಲ್‌ ಗಳಿಂದ ಹಿರಿಯ ಸಂಸದರು ಮತ್ತು ಶಾಸಕರು ಸೇರಿದಂತೆ ಕೇರಳದ ಹಿರಿಯ ಕಾಂಗ್ರೆಸ್ ನಾಯಕರು ಉಸಿರುಗಟ್ಟುವಿಕೆ ಸಮಸ್ಯೆಯಿಂದ ಬಳಲಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ನಿನ್ನೆ ಪ್ರತಿಭಟನೆ ಬಹುತೇಕ ಮುಗಿದಿತ್ತು. ಆದರೆ ಕೊನೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಹತ್ತಿ ಮುನ್ನುಗ್ಗಲು ಪ್ರಯತ್ನಿಸಿದರು. ಕಲ್ಲು ಎಸೆಯಲು ಪ್ರಾರಂಭಿಸಿದರು ಇದರಿಂದ ನಾವು ಅಶ್ರುವಾಯು ಪ್ರಯೋಗ ಮಾಡಿದ್ದೇವೆ. ಪ್ರತಿಭಟನೆಯ ಭಾಗವಾಗಿ ಸುಮಾರು 300-400 ಜನರು ಅಲ್ಲಿದ್ದರು. ಯಾವುದೇ ಗಾಯಗಳು ಆದ ಬಗ್ಗೆ ವರದಿಗಳಿಲ್ಲ. ಕಲ್ಲು ತೂರಾಟದಲ್ಲಿ ಕೆಲವು ಪತ್ರಕರ್ತರು ಗಾಯಗೊಂಡಿದ್ದಾರೆ ಆದರೆ ಅವರ್ಯಾರೂ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿಲ್ಲ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

ಎಡ ಸರ್ಕಾರದ ‘ನವ ಕೇರಳ ಸದಸ್’ ಜನಸಂಪರ್ಕ ಕಾರ್ಯಕ್ರಮದ ವೇಳೆ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯವನ್ನು ಮಾಡಿದ್ದಾರೆಂದು ಆರೋಪಿಸಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರತಿಭಟನೆ ಮೆರವಣಿಗೆಯನ್ನು ಆಯೋಜಿಸಿತ್ತು.

ಕಾಂಗ್ರೆಸ್‌ ನಾಯಕರು ಜನಸಮೂಹವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇದಿಕೆಯ ಹಿಂದೆ ಅಶ್ರುವಾಯು ಶೆಲ್‌ಗಳು ಸಿಡಿಸಿದ ಪರಿಣಾಮ ಸುಧಾಕರನ್ ಮತ್ತು ಚೆನ್ನಿತಲ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಅಸ್ವಸ್ಥಗೊಂಡಿದ್ದರು. ಕಾಂಗ್ರೆಸ್ ಮತ್ತು ಯುಡಿಎಫ್ ನಾಯಕರು ತಮ್ಮ ಪ್ರಾಣವನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವಯೋಜಿತ ದಾಳಿ ಇದು ಎಂದು ಆರೋಪಿಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ) ಮತ್ತು ಎಲ್‌ಡಿಎಫ್ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿವೆ. ವಿರೋಧ ಪಕ್ಷದ ಕಾರ್ಯಕರ್ತರು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿಕೊಂಡಿದೆ.

ಕೇರಳ ಸರಕಾರ ಮಾಡಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕೇರಳ ಸರಕಾರ ‘ನವ ಕೇರಳ ಸದಾಸ್’  ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಂಜೇಶ್ವರಂನಿಂದ ತಿರುವನಂತಪುರದವರೆಗೆ 36 ದಿನಗಳ ಯಾತ್ರೆಯಲ್ಲಿ 140 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನವ ಕೇರಳ ಸದಸ್ಯವನ್ನು ನ.18ರಿಂದ ಆರಂಭವಾಗಿತ್ತು.  ಡಿಸೆಂಬರ್ 24 ರಂದು ತಿರುವನಂತಪುರದಲ್ಲಿ ಕಾರ್ಯಕ್ರಮವು ಮುಕ್ತಾಯಗೊಂಡಿದೆ. 20 ಮಂತ್ರಿಗಳು ಮತ್ತು ಸಿಎಂ ಸೇರಿ ‘ನವ ಕೇರಳ ಸದಾಸ್’  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆ ಹಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...