ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿ, ಜಾರ್ಖಂಡ್ ಮಾದರಿಯಲ್ಲಿ ಮುಖ್ಯಮಂತ್ರಿಯವರನ್ನು ಪ್ರಕರಣದಲ್ಲಿ ಸಿಲುಕಿಸಲು ಇಡಿ ಯತ್ನಿಸುತ್ತಿದೆ ಎಂದು ಸಚಿವರು ಮತ್ತು ಸಿಎಂ ಕಾನೂನು ಸಲಹೆಗಾರರು ಆರೋಪಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಇಡಿ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ದಿ ನಿಗಮದ ಪದನಿಮಿತ್ತ ನಿರ್ದೇಶಕರೂ ಆಗಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್ ಬಿ ನೀಡಿರುವ ದೂರು ಆಧರಿಸಿ ಇಡಿ ಬೆಂಗಳೂರು ವಲಯ ಕಚೇರಿಯ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರುಳಿ ಕಣ್ಣನ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.
ಸಿಎಂ ಸಿಲುಕಿಸಲು ಒತ್ತಡ:
“ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಹಣಕಾಸು ಇಲಾಖೆ ಸೂಚನೆ ಇತ್ತು ಎಂಬುವುದಾಗಿ ಒಪ್ಪಿಕೊಳ್ಳಬೇಕು. ಆಗ ನಿಮಗೆ ಸಹಾಯ ಮಾಡುತ್ತೇವೆ. ಇಲ್ಲದಿದ್ದರೆ ಬಂಧಿಸುತ್ತೇವೆ ಎಂದು ಇಡಿ ಅಧಿಕಾರಿಗಳು ಹೆದರಿಸಿದ್ದಾಗಿ ಕಲ್ಲೇಶ್ ಬಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ : ಶಾಸಕ ಬಿ.ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ


