Homeಮುಖಪುಟಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

- Advertisement -
- Advertisement -

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ತಮಿಳುನಾಡು ಸರ್ಕಾರದ ಕ್ರೀಡಾ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಭಾನುವಾರ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ವೃತ್ತಿಯಲ್ಲಿ ವಕೀಲನಾಗಿರುವ  ವಿನೀತ್ ಜಿಂದಾಲ್ ಎಂಬಾತ ಉದಯ ನಿಧಿ ವಿರುದ್ಧ ದೂರು ನೀಡಿದ್ದಾರೆ. ಉದಯನಿಧಿ ಭಾಷಣದಲ್ಲಿ ಸನಾತನ ಧರ್ಮದ ವಿರುದ್ಧ ಪ್ರಚೋದನಕಾರಿ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸನಾತನ ಧರ್ಮ ಡೆಂಗ್ಯೂ, ಮತ್ತು ಮಲೇರಿಯಾ ಸೊಳ್ಳೆಗಳಿದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕೆಂದು ಉದಯನಿಧಿ ಸ್ಟಾಲಿನ್ ಹೇಳಿದ್ದು, ಹಿಂದೂ ಮತ್ತು ಸನಾತನ ಧರ್ಮದ ಅನುಯಾಯಿಯಾಗಿರುವ ನನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರುದಾರ ವಕೀಲ ವಿನೀತ್ ಜಿಂದಾಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೇನೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದೇನೆ. ನಾನು ಇದನ್ನು ನಿರಂತರವಾಗಿ ಹೇಳುತ್ತೇನೆ. ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ ಎಂದು  ಉದಯನಿಧಿ ಸ್ಟಾಲಿನ್  ಹೇಳಿದ್ದರು.

ಇದನ್ನ ಓದಿ: ಯುಪಿ ಉಪಚುನಾವಣೆ: ಮತದಾರರಿಗೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ; ಶಿವಪಾಲ್ ಯಾದವ್‌ 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

0
2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು...