HomeUncategorizedಆಸ್ಪತ್ರೆಯ ಶೌಚಾಲಯ ಸ್ವಚ್ಛಗೊಳಿಸುವಂತೆ ಡೀನ್‌ಗೆ ಬಲವಂತ ಮಾಡಿದ ಸಂಸದರ ವಿರುದ್ಧ ಪ್ರಕರಣ ದಾಖಲು

ಆಸ್ಪತ್ರೆಯ ಶೌಚಾಲಯ ಸ್ವಚ್ಛಗೊಳಿಸುವಂತೆ ಡೀನ್‌ಗೆ ಬಲವಂತ ಮಾಡಿದ ಸಂಸದರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 31 ಜನರು ಸಾವನ್ನಪ್ಪಿದ ಆಸ್ಪತ್ರೆಯಲ್ಲಿ ಕೊಳಕು ಶೌಚಾಲಯವನ್ನು ಕಂಡು ಡೀನ್‌ ಕೈಯಲ್ಲಿ ಶುಚಿಗೊಳಿಸಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಮಾನಹಾನಿ ಮಾಡಿದ ಆರೋಪದ ಮೇಲೆ ಹಂಗಾಮಿ ಡೀನ್ ಎಸ್‌ಆರ್ ವಾಕೋಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಪಾಟೀಲ್ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಸಂಸದರಾದ ಹೇಮಂತ್ ಪಾಟೀಲ್, ಸರಣಿ ಸಾವು ಸಂಭವಿಸಿದ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ವಾಕೋಡೆ ಅವರಿಗೆ ಪೊರಕೆ ನೀಡಿ ಕೊಳಕು ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದ್ದು, ಅದರಂತೆ ಡೀನ್ ಸ್ವಚ್ಛತೆ ಕಾರ್ಯವನ್ನು ಮಾಡಿದ್ದರು. ಈ ಘಟನೆಯು ತನಗೆ ಮಾನಹಾನಿ ಮಾಡಿದೆ ಎಂದು ಡೀನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಪಾಟೀಲ ಅವರ ಮೇಲೆ ಸಾರ್ವಜನಿಕ ನೌಕರನ ಹಲ್ಲೆ, ಮಾನಹಾನಿ, ಕ್ರಿಮಿನಲ್ ಬೆದರಿಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ 35ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು,  ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಆಸ್ಪತ್ರೆಗೆ ಭೇಟಿ ನೀಡುವ ಮುನ್ನವೇ ಆಸ್ಪತ್ರೆಗೆ ಆಗಮಿಸಿದ ಸಂಸದ ಹೇಮಂತ ಪಾಟೀಲ್, ಕೊಳಚೆ ಸ್ಥಿತಿಯಲ್ಲಿರುವ ಶೌಚಾಲಯವನ್ನು ಗಮನಿಸಿದರು. ಅದನ್ನು ಸ್ವಚ್ಛಗೊಳಿಸುವಂತೆ ಆಸ್ಪತ್ರೆಯ ಡೀನ್‌ಗೆ ಸೂಚಿಸಿದ್ದಾರೆ.

ಡೀನ್ ಶೌಚಾಲಯವನ್ನು ಶುಚಿಗೊಳಿಸುವಾಗ ಸಂಸದರು ನಿಂತುಕೊಂಡು ಪೈಪ್‌ನ್ನು ಹಿಡಿದಿರುವುದು ವೀಡಿಯೊಗಳಲ್ಲಿ ಕಂಡು ಬಂದಿದೆ. ಡೀನ್‌ ಟಾಯ್ಲೆಟ್‌ ಸ್ವಚ್ಛಗೊಳಿಸುವಾಗ ಸಂಸದರು ಟಾಯ್ಲೆಟ್‌ಗೆ ಪೈಪ್‌ ಮೂಲಕ ನೀರು ಹಾಕುವುದು ಕಂಡು ಬಂದಿದೆ.

ಇದಲ್ಲದೆ ರೋಗಿಗಳ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಪಾಟೀಲ್ ಒತ್ತಾಯಿಸಿದ್ದರು.

ಸೋಮವಾರ ಇದೇ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವುಗಳು ಸಂಭವಿಸಿದೆ ಮತ್ತು ಮಂಗಳವಾರ 48 ಗಂಟೆಗಳಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಇನ್ನು 71 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಆದರೆ ಡೀನ್ ವಕೋಡೆ ಅವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ ಎಂದು ಹೇಳಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದರೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ನಾಂದೇಡ್‌ನಲ್ಲಿ ಸರಣಿ ಸಾವು ಸಂಭವಿಸಿದ ಆಸ್ಪತ್ರೆಯ ಶೌಚಾಲಯವನ್ನು ಡೀನ್ ಕೈಯಲ್ಲೇ ಶುಚಿಗೊಳಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...